Advertisement

‘ನಮ್ಮ ಮಗು’ವಿಗೆ ಪ್ರಶಸ್ತಿ ಗರಿ

03:54 PM Oct 19, 2021 | Team Udayavani |

“ನಮ್ಮ ಮಗು’- ಹೀಗೊಂದು ಚಿತ್ರ ಸದ್ದಿಲ್ಲದೇ ತಯಾರಾಗಿದ್ದು, ಜೊತೆಗೆ ಸಾಕಷ್ಟು ಪ್ರಶಸ್ತಿಗಳನ್ನು ಪಡೆದುಕೊಂಡಿರುವ ವಿಚಾರ ನಿಮಗೆ ಗೊತ್ತಿರಬಹುದು. ಈಗ ಈ ಚಿತ್ರಕ್ಕೆ ಮತ್ತೂಂದು ಸಂಭ್ರಮ.

Advertisement

ಯುನೆಸ್ಕೋ ಹಾಗೂ ಅಮೆರಿಕನ್‌ ಸೆಂಟರ್‌ ಆಯೋಜಿಸಿರುವ ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ “ನಮ ಮಗು’ ಚಿತ್ರ ಆಯ್ಕೆಯಾಗಿ ಪ್ರದರ್ಶನಗೊಂಡಿದೆ. ಜೊತೆಗೆ ಈ ಚಿತ್ರದ ನಿರ್ದೇಶಕ ಕೆ.ಗಣೇಶನ್‌ ಅವರಿಗೆ ಯುರೋ ಏಶಿಯಾ ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ “ಅತ್ಯುತ್ತಮ ನಿರ್ದೇಶಕ’ ಪ್ರಶಸ್ತಿ ಪಡೆದುಕೊಂಡಿದೆ.

ಈ ಬಗ್ಗೆ ಖುಷಿ ಹಂಚಿಕೊಂಡಿರುವ ಗಣೇಶನ್‌,”ದಕ್ಷಿಣ ಭಾರತದ ಇತಿಹಾಸದಲ್ಲೇ ಈ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡ ಚಿತ್ರ ನಮ್ಮ ಮಗು ಎನ್ನುವುದು ಹೆಮ್ಮೆಯ ವಿಚಾರ’ ಎನ್ನುತ್ತಾರೆ. ಇತ್ತೀಚೆಗೆ ಈ ಚಿತ್ರದ ಟೀಸರ್‌ ಬಿಡುಗಡೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next