Advertisement
ಕರ್ನಾಟಕ ಅರೆಭಾಷೆ ಸಂಸ್ಕೃತಿಕ ಮತ್ತು ಸಾಹಿತ್ಯ ಅಕಾಡೆಮಿ ಮಡಿಕೇರಿ ವತಿಯಿಂದ ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘಗಳ ಸಹಯೋಗದಲ್ಲಿ ತೆಂಕಿಲ ಒಕ್ಕಲಿಗ ಸಮುದಾಯ ಭವನದಲ್ಲಿ ನಡೆದ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ -2018 ಮತ್ತು ಸಾಂಸ್ಕೃತಿಕ ಹಬ್ಬ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಅಭಿನಂದನ ಮಾತುಗಳನ್ನಾಡಿದ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಸೀತಾರಾಮ ಕೇವಳ, ಭಾಷಾ ವಿಜ್ಞಾನಿಯಾಗಿ ಅರೆಭಾಷೆಯ ಉಚ್ಛಾರಶಾಸ್ತ್ರ,ಶಾಸ್ತ್ರೀಯ ಚೌಕಟ್ಟು ತಂದ ಪ್ರೊ| ಕೋಡಿ ಕುಶಾಲಪ್ಪ ಗೌಡ, ಶಿಕ್ಷಣ ತಜ್ಞ ಡಾ| ಸುಕುಮಾರ ಗೌಡ, ಅರೆಭಾಷಾ ಬೆಳವಣಿಗೆಯಲ್ಲಿ ಅವಿರತ ಶ್ರಮಿಸಿದ ಕಾಳೆಯಂಡ ತಂಗಮ್ಮ ಅಪ್ಪಚ್ಚು ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿ ಗೌರವಿಸುವ ಮೂಲಕ ಅಕಾಡೆಮಿಯು ಸ್ತುತ್ಯರ್ಹ ಕಾರ್ಯ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
Related Articles
Advertisement
ಜಿ.ಪಂ. ಸದಸ್ಯೆ ಶಯನಾ ಜಯಾನಂದ, ಮಾಜಿ ಸದಸ್ಯ ಕೇಶವ ಗೌಡ ಬಜತ್ತೂರು, ತಾ.ಪಂ. ಸದಸ್ಯ ಲಕ್ಷ್ಮಣ ಗೌಡ ಬೆಳ್ಳಿಪ್ಪಾಡಿ, ತಾ.ಪಂ. ಮಾಜಿ ಅಧ್ಯಕ್ಷ ಜಯಾನಂದ, ಗ್ರಾ.ಪಂ. ಉಪಾಧ್ಯಕ್ಷ ಬಾಬು ಗೌಡ, ಸದಸ್ಯರಾದ ಭವ್ಯಾ, ಯಶೋದಾ, ಭವಾನಿ, ಲಿಂಗಪ್ಪ ಹಾಗೂ ಅಭಿವೃದ್ಧಿ ಅಧಿಕಾರಿ ಚಿತ್ರಾವತಿ ಉಪಸ್ಥಿತರಿದ್ದರು.
ಬನ್ನೂರು ರೈತರ ಸೇ.ಸ. ಸಂಘದ ನಿರ್ದೇಶಕ ಮೋಹನ ಪಕ್ಕಳ ಕುಂಡಾಪು ಸ್ವಾಗತಿಸಿ, ರಾಮಚಂದ್ರ ಪೂಜಾರಿ ವಂದಿಸಿದರು. ಗ್ರಾ.ಪಂ. ಸದಸ್ಯ ಮನೋಹರ್ ಗೌಡ ಡಿ.ವಿ. ಕಾರ್ಯಕ್ರಮ ನಿರ್ವಹಿಸಿದರು.
ಅಕಾಡೆಮಿ ಪ್ರಶಸ್ತಿ ಪ್ರದಾನಅರೆಭಾಷೆ ಸಾಹಿತ್ಯ ಕ್ಷೇತ್ರ, ಅಧ್ಯಯನ ಹಾಗೂ ಸಂಶೋಧನೆ ಮತ್ತು ಅರೆಭಾಷೆ ಸಂಸ್ಕೃತಿ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿದ ಪ್ರೊ| ಕೋಡಿ ಕುಶಾಲಪ್ಪ ಗೌಡ, ಡಾ| ಎನ್. ಸುಕುಮಾರ ಗೌಡ, ಕಾಳೆಯಂಡ ತಂಗಮ್ಮ ಅಪ್ಪಚ್ಚು ಅವರನ್ನು 2018ರ ಅಕಾಡೆಮಿ ಗೌರವ ಪ್ರಶಸ್ತಿ ನೀಡಿ ಸಮ್ಮಾನಿಸಲಾಯಿತು. ಪ್ರಶಸ್ತಿಯೊಂದಿಗೆ 50 ಸಾವಿರ ರೂ. ನಗದು, ಹಾರ, ಫಲ ತಾಂಬೂಲ, ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರ ಪ್ರದಾನ ಮಾಡಲಾಯಿತು.