Advertisement

Award: ರಾಜ್ಯದ ಕ್ರೀಡಾಪಟುಗಳಿಗೆ ಅಗತ್ಯ ಸವಲತ್ತು, ನೆರವು ನೀಡಲು ಸಿದ್ಧ: ಸಿಎಂ

12:41 AM Dec 02, 2024 | Team Udayavani |

ಬೆಂಗಳೂರು: ರಾಜ್ಯದ ಕ್ರೀಡಾಪಟುಗಳಿಗೆ ಅಗತ್ಯ ಸವಲತ್ತು-ನೆರವು ನೀಡಲು ನಾವು ಸದಾ ಸಿದ್ದ. ರಾಜ್ಯ ಬಜೆಟ್‌ನಲ್ಲಿ ಕ್ರೀಡಾ ಕ್ಷೇತ್ರಕ್ಕೆ ನಿರಂತರ ಅನುದಾನ ನೀಡಲಾಗಿದೆ. ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ರಾಜ್ಯದ ಕ್ರೀಡಾಪಟುವಿಗೆ 6 ಕೋಟಿ ರೂ., ಬೆಳ್ಳಿ ಗೆದ್ದವರಿಗೆ 4 ಕೋಟಿ ರೂ. ಮೀಸಲಿಟ್ಟಿದ್ದೇವೆ. ದೇಶಕ್ಕೆ ಒಂದು ಚಿನ್ನದ ಪದಕ ತನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರೀಡಾಪಟುಗಳಿಗೆ ಕರೆ ನೀಡಿದರು.

Advertisement

ಕರ್ನಾಟಕ ಒಲಿಂಪಿಕ್‌ ಸಂಸ್ಥೆ ಯವನಿಕಾದಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ, ಕ್ರೀಡಾಪಟುಗಳಿಗೆ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು. ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಬೇಕು ಎನ್ನುವ ಪೋತ್ಸಾಹದಾಯಕ ಉದ್ದೇಶದಿಂದ ಕರ್ನಾಟಕ ಒಲಿಂಪಿಕ್‌ ಸಂಸ್ಥೆ 22 ವರ್ಷಗಳಿಂದ ಈ ಪ್ರಶಸ್ತಿಗಳನ್ನು ನೀಡುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಕಾರ್ಯಕ್ರಮದಲ್ಲಿ ಗೃಹ ಸಚಿವ ಜಿ. ಪರಮೇಶ್ವರ್‌, ಕರ್ನಾಟಕ ಒಲಿಂಪಿಕ್‌ ಸಂಸ್ಥೆಯ ಅಧ್ಯಕ್ಷ ಗೋವಿಂದರಾಜು ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next