Advertisement
ಕರ್ನಾಟಕ ಒಲಿಂಪಿಕ್ ಸಂಸ್ಥೆ ಯವನಿಕಾದಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ, ಕ್ರೀಡಾಪಟುಗಳಿಗೆ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು. ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಬೇಕು ಎನ್ನುವ ಪೋತ್ಸಾಹದಾಯಕ ಉದ್ದೇಶದಿಂದ ಕರ್ನಾಟಕ ಒಲಿಂಪಿಕ್ ಸಂಸ್ಥೆ 22 ವರ್ಷಗಳಿಂದ ಈ ಪ್ರಶಸ್ತಿಗಳನ್ನು ನೀಡುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು.ಕಾರ್ಯಕ್ರಮದಲ್ಲಿ ಗೃಹ ಸಚಿವ ಜಿ. ಪರಮೇಶ್ವರ್, ಕರ್ನಾಟಕ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷ ಗೋವಿಂದರಾಜು ಮತ್ತಿತರರು ಉಪಸ್ಥಿತರಿದ್ದರು.