Advertisement

ಪ್ರಾಥಮಿಕ-ಪ್ರೌಢಶಾಲೆಯ 33 ಶಿಕ್ಷಕರಿಗೆ ಪ್ರಶಸ್ತಿ

03:25 PM Sep 15, 2022 | Team Udayavani |

ಆಳಂದ: ಸೆ.24ರಂದು ಪಟ್ಟಣದ ಗುರುಭವನ ದಲ್ಲಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಮ್ಮಿಕೊಂಡಿದ್ದು, ಪ್ರಾಥಮಿಕ ಹಾಗೂ ಪ್ರೌಢಶಾಲೆಯ 33 ಶಿಕ್ಷಕರಿಗೆ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಹಾಗೂ ಹೊಸ ಶಿಕ್ಷಣ ನೀತಿ ಕಾರ್ಯಾಗಾರ, ನಿವೃತ್ತ ಶಿಕ್ಷಕರ ಸನ್ಮಾನ ಸಮಾರಂಭ ನಡೆಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ತೀರ್ಮಾನಿಸಲಾಯಿತು.

Advertisement

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ರಾಜ್ಯ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಸಂಘದ ಆಶ್ರಯದಲ್ಲಿ ನಡೆಯುವ ಸಮಾರಂಭದ ಪೂರ್ವ ಸಿದ್ಧತೆ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಬುಧವಾರ ಕರೆದ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಚಿತ್ರಶೇಖರ ದೇಗುಲಮಡಿ ವಿವರಣೆ ನೀಡಿದರು.

ಈ ಬಾರಿ ಕ್ಲಸ್ಟರ್‌ಗೆ ಒಂದರಂತೆ ಪ್ರಾಥಮಿಕ ವಿಭಾಗದಿಂದ 25ಶಿಕ್ಷಕರಿಗೆ ಮತ್ತು ಪ್ರೌಢಶಾಲಾ ವಿಭಾಗದ 8ವಲಯದ 8ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಲಾಗುವುದು. ಅಂದು ಬೆಳಗ್ಗೆ 8:30ರಿಂದ 10 ಗಂಟೆ ವರೆಗೆ ಹೊಸ ಶಿಕ್ಷಣ ನೀತಿ ಕುರಿತು ಕಾರ್ಯಗಾರ ನಡೆಸಿ, ಆನಂತರ ಸಮಾರಂಭ ನಡೆಸಲಾಗುವುದು ಎಂದು ಹೇಳಿದರು.

ಸೆ. 26ರಂದು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮ ಯಶಸ್ಸಿಗೆ ಶ್ರಮಿಸಬೇಕು ಎಂದು ಸೂಚಿಸಿದರು. ಕ್ಷೇತ್ರ ಸಮನ್ವಯಾಧಿಕಾರಿ ಬಸವರಾಜ ದೊಡ್ಡಮನಿ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಖಜೂರಿ, ಕಾರ್ಯದರ್ಶಿ ವಿನೋಧ ಕುಲಕರ್ಣಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನರಸಪ್ಪ ಬಿರಾದಾರ, ಉಪಾಧ್ಯಕ್ಷ ಶ್ರೀಶೈಲ ಮಾಡಿಯಾಳೆ, ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಸಿದ್ಧರಾಮ ಪಾಟೀಲ, ಆದರ್ಶ ಆಂಗ್ಲ ಶಾಲೆ ಮುಖ್ಯ ಶಿಕ್ಷಕ ಶಿವರಾಜ ಖಂಡಾಳೆ ಮತ್ತಿತರರು ಸಭೆಯಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next