Advertisement
ಬುಧವಾರ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಸಹಯೋಗದಲ್ಲಿ ನೀಡಲಾದ ನೃಪತುಂಗ ಸಾಹಿತ್ಯ ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದ ಅವರು, ನಮ್ಮ ದೇಶ ಕೂಡು ಕುಟುಂಬವಿದ್ದಂತೆ. ಆದರೆ ಅದನ್ನು ಈ ಹಿಂದೆಯೇ ಒಡೆಯಲಾಗಿದೆ. ಒಮ್ಮೆ ಹೊಡೆದು ಹೋದ ಮೇಲೆ ಮತ್ತೆ ಒಂದಾಗುವುದು ಸುಲಭವಲ್ಲ. ಹಿಂದೆ ಉಂಟಾದ ಒಡಕು ಮತ್ತೆ ಕೂಡುವಂತಾಗಿಲ್ಲ. ಹೊತ್ತಿದ ಜ್ವಾಲೆ ಉರಿಯುತ್ತಲೇ ಇದೆ. ಅದನ್ನು ಆರಿಸುವ ಕೆಲಸ ಮಾಡದಿದ್ದರೆ ಮುಂದೆ ದೊಡ್ಡ ಅನಾಹುತವಾಗುತ್ತದೆ ಎಂದರು.
Related Articles
Advertisement
ಹಿರಿಯ ಕವಿ ಡಾ| ಎಚ್.ಎಸ್. ವೆಂಕಟೇಶಮೂರ್ತಿ, ಕಸಾಪ ಅಧ್ಯಕ್ಷ ನಾಡೋಜ ಡಾ| ಮಹೇಶ ಜೋಷಿ, ಹಿರಿಯ ಕವಯಿತ್ರಿ ಸವಿತಾ ನಾಗಭೂಷಣ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸತ್ಯವತಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕ್ರಿಯಾ ಸಮಿತಿ ರಾಜ್ಯಾಧ್ಯಕ್ಷ ವ.ಚ. ಚನ್ನೇಗೌಡ ಇತರರಿದ್ದರು.
ಮಯೂರ ವರ್ಮ ಪ್ರಶಸ್ತಿ ಪುರಸ್ಕೃತರುಡಾ| ಬೇಲೂರು ರಘುನಂದನ, ವಿದ್ಯಾರಶ್ಮಿ ಪೆಲತ್ತಡ್ಕ, ಡಾ. ಸತ್ಯಮಂಗಲ ಮಹಾದೇವ, ಹನುಮಂತ ಸೋಮನಕಟ್ಟಿ, ಗುಡ್ಡಪ್ಪ ಬೆಟಗೇರಿ ಅವರಿಗೆ ಮಯೂರ ವರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿ ಮೊತ್ತ 7 ಲಕ್ಷ ರೂ.
ಬಿಎಂಟಿಸಿ ಸಂಸ್ಥೆಯು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸಾರಿಗೆ ಸಂಸ್ಥೆ ಕನ್ನಡ ಕ್ರಿಯಾ ಸಮಿತಿಯ ಆಸಕ್ತಿಯ ಫಲವಾಗಿ 1.5 ಕೋಟಿ ರೂ.ಗಳನ್ನು ದತ್ತಿ ಇಡಲಾಗಿದೆ. ಕನ್ನಡದಲ್ಲಿ ಮೌಲಿಕ ಸಾಹಿತ್ಯ ರಚಿಸಿರುವ ಹಿರಿಯ ಸಾಹಿತಿಯೊಬ್ಬರಿಗೆ ಪ್ರತಿ ವರ್ಷ 7 ಲಕ್ಷ ರೂ. ಇರುವ ನೃಪತುಂಗ ಸಾಹಿತ್ಯ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಸ್ತ್ರೀವಾದಕ್ಕೆ ಹೊಸ ಆಯಾಮ ನೀಡಿದ ವೈದೇಹಿ
ಬೆಂಗಳೂರು: ಸ್ತ್ರೀವಾದಕ್ಕೆ ಹೊಸ ಆಯಾಮ ನೀಡಿದವರು ಲೇಖಕಿ ವೈದೇಹಿ. ಅವರು “ಅಕ್ಕು’ ಪಾತ್ರದ ಮೂಲಕ ಸ್ತ್ರೀಯ ತಾಳ್ಮೆ, ಹುದುಗಿದ ಶಕ್ತಿ ಅನಾವರಣಗೊಳಿಸಿದ್ದಾರೆ ಎಂದು ಹಿರಿಯ ವಿಮರ್ಶಕ ಪ್ರೊ| ಸಿ.ಎನ್.ರಾಮಚಂದ್ರನ್ ಹೇಳಿದರು. ಕರ್ನಾಟಕ ಲೇಖಕಿಯರ ಸಂಘ ಹಾಗೂ ವಸಂತ ಪ್ರಕಾಶನ ಸಹಯೋಗದಲ್ಲಿ ಚಿತ್ರಕಲಾ ಪರಿಷತ್ತಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಲೇಖಕಿ ವೈದೇಹಿ ಅವರಿಗೆ ಅಭಿನಂದನೆ ಹಾಗೂ ಲಲಿತಮ್ಮ ಚಂದ್ರಶೇಖರ್ ಅವರ “ನೆನಪಿನ ಉಗ್ರಾಣ’ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.