Advertisement
ಬಿಜೆಪಿ ಬೆಂಗಳೂರು ಮಹಾನಗರ ಘಟಕವು ನಗರದ ಭಾರತೀಯ ವಿದ್ಯಾಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ “ತುರ್ತುಪರಿಸ್ಥಿತಿ ಒಂದು ಕರಾಳ ನೆನಪು’ ಕಾರ್ಯಕ್ರಮದಲ್ಲಿ ಪ್ರಮುಖ ಭಾಷಣಕಾರರಾಗಿ ಮಾತನಾಡಿದ ಅವರು, ಅಧಿಕಾರ ಒಂದೇ ಕುಟುಂಬದವರಲ್ಲಿ ಮುಂದುವರಿಯುವುದು, ಅಧಿಕಾರವು ತಲೆಮಾರುಗಳ ಹಕ್ಕು ಎಂಬ ಧೋರಣೆ ಅಪಾಯಕಾರಿ. ಈ ಬಗ್ಗೆ ಜನರಲ್ಲಿ ನಿರಂತರವಾಗಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
Related Articles
Advertisement
ಕಲ್ಯಾಣ ರಾಜ್ಯ ನಿರ್ಮಾಣಕ್ಕೆ ಪ್ರಯತ್ನ ನಡೆದಿದೆ ಎಂದು ಹೇಳಿದರು. ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ತುರ್ತು ಪರಿಸ್ಥಿತಿ ದೇಶದ ಇತಿಹಾಸದಲ್ಲಿ ಕರಾಳ ಅಧ್ಯಾಯ. ಅಧಿಕಾರ ರಕ್ಷಣೆಗಾಗಿ ಕಾಂಗ್ರೆಸ್ ಹೇರಿದ ತುರ್ತು ಪರಿಸ್ಥಿತಿಯಿಂದ ಜನತಂತ್ರದ ಕಗ್ಗೊಲೆಯಾಯಿತು ಎಂದರು.
ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಬಿಜೆಪಿ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಭಾರತಿ ಶೆಟ್ಟಿ, ಬಿಜೆಪಿ ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷ ಪಿ.ಎನ್.ಸದಾಶಿವ ಉಪಸ್ಥಿತರಿದ್ದರು.
ಬುದ್ದಿಜೀವಿಗಳಿಗೆ ಪ್ರಶ್ನೆ: ತುರ್ತು ಪರಿಸ್ಥಿತಿ ಕರಾಳ ಘಟನೆ ಸಂಭವಿಸಿ 43 ವರ್ಷ ಕಳೆದರೂ ಕಾಂಗ್ರೆಸ್ ಪಶ್ಚಾತಾಪ ಪಡುತ್ತಿಲ್ಲ. ರಾಜ್ಯ, ರಾಷ್ಟ್ರದ ಬುದ್ದಿಜೀವಿಗಳಿಗೆ ಒಂದು ಪ್ರಶ್ನೆ ಕೇಳ ಬಯಸುತ್ತೇನೆ. ದೇಶದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ,
ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲಾಗುತ್ತಿದೆ ಎಂದು ಬೊಬ್ಬೆ ಹೊಡೆಯುತ್ತಿದ್ದಾರೆ. ಆದರೆ ಕಾಂಗ್ರೆಸ್‌ನ ಹಿಂದಿನ ಆಡಳಿತ ಕಾರ್ಯವೈಖರಿ ಬಗ್ಗೆ ಗೊತ್ತಿಧ್ದೋ, ಗೊತ್ತಿಲ್ಲದೆಯೋ ಕಾಂಗ್ರೆಸ್ ಬೆಂಬಲಿಸುತ್ತಿರುವುದು ದೇಶದ ದುರಂತವೇ ಸರಿ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದರು.
“ದೇಶ ರಕ್ಷಿಸುವ ಸೇನೆ ಬಗ್ಗೆ ಕಾಂಗ್ರೆಸ್ ಸಂಶಯ ವ್ಯಕ್ತಪಡಿಸುತ್ತದೆ. ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರಿಗಿಂತ ಭದ್ರತಾ ಪಡೆಗಳಿಂದ ಹೆಚ್ಚು ಜನ ಹತರಾಗಿದ್ದಾರೆ ಎಂದು ಸುದ್ದಿ ಹಬ್ಬಿಸುತ್ತಿದೆ. ಭಾರತೀಯ ಸೈನಿಕರ ಶೌರ್ಯವನ್ನು ಇಡೀ ವಿಶ್ವವೇ ಪ್ರಶಂಸಿಸುತ್ತಿದ್ದರೆ ಕಾಂಗ್ರೆಸ್ ಮಾತ್ರ ದೇಶ ರಕ್ಷಣೆಯ ಈ ಕ್ರಮವನ್ನು ಪ್ರಶ್ನಿಸುತ್ತಿದೆ’. -ಎಂ.ಜೆ. ಅಕರ್, ಕೇಂದ್ರ ವಿದೇಶಾಂಗ ರಾಜ್ಯ ಸಚಿವ.