Advertisement

ಎಚ್‌1ಎನ್‌1 ಕುರಿತು ಜಾಗೃತಿ ಜಾಥಾ

12:36 PM Oct 23, 2018 | Team Udayavani |

ಯಲಹಂಕ: ಎಚ್‌1ಎನ್‌1 ಸಾಮಾನ್ಯ ವೈರಲ್‌ ಜ್ವರವಾಗಿದ್ದು, ಸಮಯೋಚಿತ ಹಾಗೂ ನಿರ್ದಿಷ್ಟ ಚಿಕಿತ್ಸೆಯಿಂದ ರೋಗಿಗಳು ಸಂಪೂರ್ಣ ಗುಣಮುಖರಾಗುತ್ತಾರೆ ಎಂದು ಭಾರತೀಯ ವೈದ್ಯಕೀಯ ಸಂಘದ ರಾಜ್ಯಾಧ್ಯಕ್ಷ ಡಾ.ಎಚ್‌.ಎನ್‌.ರವೀಂದ್ರ ಹೇಳಿದರು.

Advertisement

ಬೆಂಗಳೂರು ನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಖೆ, ಯಲಹಂಕ ಸಾರ್ವಜನಿಕ ಆಸ್ವತ್ರೆ ಸಂಯುಕ್ತ ಆಶ್ರಯಲ್ಲಿ ಎಚ್‌1ಎನ್‌1 ಜ್ವರ ಪ್ರಕರಣಗಳ ನಿಯಂತ್ರಣ ಕಾರ್ಯಕ್ರಮದಡಿ ಸೋಮವಾರ ಹಮ್ಮಿಕೊಂಡಿದ್ದ ಜನಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತೀವ್ರ ಜ್ವರ, ಕೆಮ್ಮು, ಅತಿಸಾರ ಬೇಧಿ, ವಾಂತಿ, ನೆಗಡಿ ಮತ್ತು ಗಂಟಲು ಕೆರೆತ, ಅತಿಯಾದ ಮೈಕೈ ನೋವು, ಉಸಿರಾಟದ ತೊಂದರೆ ಕಂಡುಬಂದಲ್ಲಿ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದು ಸೂಕ್ತ ಚಿಕಿತ್ಸೆ ಕೊಡಿಸಬೇಕು ಎಂದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಎನ್‌.ಮನೋಹರ್‌ ಮಾತನಾಡಿ, ರಸ್ತೆ ಬದಿ, ಅಂಗಳ ಸೇರಿ ಎಲ್ಲೆಂದರಲ್ಲಿ ಉಗುಳಬಾರದು, ಕೆಮ್ಮುವಾಗ ಅಥವಾ ಸೀನುವಾಗ ಬಾಯಿ ಮತ್ತು ಮೂಗನ್ನು ಕರವಸ್ತ್ರದಿಂದ ಮುಚ್ಚಿಕೊಳ್ಳಬೇಕು, ಜನಸಂದಣಿ ಇರುವ ಸ್ಥಳಗಳಿಗೆ ಹೋದಾಗ ಸಾಕಷ್ಟು ಮುಂಜಾಗ್ರತೆ ಕ್ರಮ ವಹಿಸಬೇಕು ಎಂದು ಸಲಹೆ ನೀಡಿದರು.

ಜಾಗೃತಿ ಜಾಥಾಗೆ ಶಾಸಕ ಎಸ್‌.ಆರ್‌.ವಿಶ್ವನಾಥ್‌ ಚಾಲನೆ ನೀಡಿದರು. ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಆಸ್ಮಾ, ಆರೋಗ್ಯ ಸಮಿತಿ ಪದಾಧಿಕಾರಿಗಳಾದ ಜಗದಾಳೆ, ನರೇಂದ್ರ, ದಶರಥ, ನಾಗರಿಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಅ.ಬ.ಶಿವಕುಮಾರ್‌ ಮತ್ತಿತರರು ಹಾಜರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next