Advertisement
ಸರಕಾರ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವುದು, ಸ್ವತ್ಛತೆ ಕಾಪಾಡುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು. ಸಾರ್ವಜನಿಕರಲ್ಲಿ ಅತ್ಮವಿಶ್ವಾಸ ತುಂಬುವುದರ ಜತೆಗೆ ಸೋಂಕು ಹರಡುವುದನ್ನು ತಡೆಗಟ್ಟಲು ಸರಕಾರ ಮತ್ತು ಸ್ಥಳೀಯ ಆಡಳಿತ ಸಂಸ್ಥೆಗಳು ಕೈಗೊಂಡಿರುವ ಕ್ರಮಗಳ ಮೇಲ್ವಿಚಾರಣೆ ನಡೆಸಿ ಸಂದರ್ಭಾನುಸಾರ ಅಗತ್ಯ ಸಲಹೆಗಳನ್ನು ನೀಡುವುದು. ಒಟ್ಟಾರೆ ಕೋವಿಡ್-19 ವೈರಸ್ ಸೋಂಕು ಹರಡುವುದನ್ನು ತಡೆಯಲು ಸರಕಾರ ಜಿಲ್ಲೆ, ತಾಲೂಕು ಮತ್ತು ಗ್ರಾಮ ಮಟ್ಟದಲ್ಲಿ ನಡೆಸುತ್ತಿರುವ ಪ್ರಯತ್ನಗಳಿಗೆ ಶಕ್ತಿ ತುಂಬುವುದು ಕಾನೂನು ಸೇವಾ ಪ್ರಾಧಿಕಾರದ ಮುಖ್ಯ ಉದ್ದೇಶವಾಗಿದೆ.
ಅಲ್ಲದೇ ಸ್ಥಳೀಯ ಆಡಳಿತ ಕೈಗೊಳ್ಳುತ್ತಿರುವ ಕ್ರಮಗಳು ಮೇಲ್ವಿಚಾರಣೆ, ಸ್ಯಾನಿಟೈಸರ್, ಮಾಸ್ಕ್, ಗ್ಲೌಸ್ ವಿತರಣೆ, ಕಾರ್ಮಿಕರಿಗೆ ಅನ್ನ-ಆಶ್ರಯ, ವೈದ್ಯಕೀಯ ಸೌಲಭ್ಯಗಳ ಕುರಿತು ಮೇಲ್ವಿಚಾರಣೆ ನಡೆಸಿ ಜಿಲ್ಲಾಡಳಿತದೊಂದಿಗೆ ಅಗತ್ಯ ಸಮನ್ವಯ ಸಾಧಿಸುವುದು ಮತ್ತು ಸಹಕಾರ ನೀಡುವುದು ಪ್ರಾಧಿಕಾರದ ಜಾಗೃತಿ ಅಭಿಯಾನದ ಭಾಗವಾಗಿದೆ. ಇದಕ್ಕೆ ತಗಲುವ ವೆಚ್ಚವನ್ನು ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಭರಿಸಲಿದೆ.
Related Articles
ಕೋವಿಡ್-19 ವೈರಸ್ ಸೋಂಕು ಹರಡುವುದನ್ನು ತಡೆಗಟ್ಟಲು ಜನರಲ್ಲಿ ಜಾಗೃತಿ ಮೂಡಿಸುವ ತನ್ನ ಅಭಿಯಾನದಲ್ಲಿ ಕಾನೂನು ಸೇವಾ ಪ್ರಾಧಿಕಾರ ಕೈದಿಗಳ ಸೇವೆಯನ್ನೂ ಪಡೆದುಕೊಳ್ಳುತ್ತಿದೆ. ಒಂದಿಷ್ಟು ತಿಳಿವಳಿಕೆ, ಸಾಮಾನ್ಯ ಜ್ಞಾನ ಇರುವ ಶಿಕ್ಷೆಗೊಳಗಾದ ಮತ್ತು ವಿಚಾರಣಾಧೀನ ಕೈದಿಗಳನ್ನು ಆವಶ್ಯಕತೆಗೆ ತಕ್ಕಂತೆ ಒಂದೊಂದು ಜೈಲಲ್ಲಿ 2, 4 ಅಥವಾ 6 ಮಂದಿ ಕೈದಿಗಳನ್ನು ಪ್ಯಾರಾ ಲೀಗಲ್ ಸ್ವಯಂಸೇವಕರನ್ನಾಗಿ ನೇಮಕ ಮಾಡಿಕೊಳ್ಳಲಾಗಿದೆ. ಇವರು ಇತರ ಕೈದಿಗಳಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಿದ್ದಾರೆ. ಇದಲ್ಲದೇ ಏನಾದರೂ ಆರೋಗ್ಯ ಸಮಸ್ಯೆ ಇದ್ದರೆ ಜೈಲು ಅಧಿಕಾರಿಗಳಿಗೆ ಮಾಹಿತಿ ನೀಡುತ್ತಾರೆ. ಮೇಲ್ಮನವಿ ಸಲ್ಲಿಸಲು ಆವಶ್ಯಕತೆ ಇರುವ ಕೈದಿಗಳ ವಿಚಾರವನ್ನು ಪ್ರಾಧಿಕಾರದ ಪ್ಯಾನಲ್ ವಕೀಲರ ಗಮನಕ್ಕೆ ತರುವ ಕೆಲಸವನ್ನು ಈ ಕೈದಿಗಳು ಮಾಡಲಿದ್ದಾರೆ.
Advertisement