Advertisement

ಮಾನ್‌ಧನ್‌ ಯೋಜನೆ ಜಾಗೃತಿ ರಥಕ್ಕೆ ಚಾಲನೆ

02:49 PM Jan 05, 2021 | Team Udayavani |

ಚಿತ್ರದುರ್ಗ: ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್‌ ಧನ್‌ ಯೋಜನೆ ಹಾಗೂ ವ್ಯಾಪಾರಿಗಳು ಹಾಗೂಸ್ವಯಂ ಉದ್ಯೋಗಿಗಳಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಯ ಕುರಿತು ಜಾಗೃತಿ ಮೂಡಿಸುವ ಸಂಚಾರಿ ರಥಕ್ಕೆ ಜಿಲ್ಲಾಧಿಕಾರಿ ಕವಿತಾ ಎಸ್‌.ಮನ್ನಿಕೇರಿ ಚಾಲನೆ ನೀಡಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಹಾಗೂಕಾರ್ಮಿಕ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಜಿಲ್ಲಾ ಕಾರ್ಮಿಕ ಅಧಿಕಾರಿ ವಿನುತಾಮಾತನಾಡಿ, ಪ್ರಧಾನಮಂತ್ರಿ ಶ್ರಮಯೋಗಿ ಮನ್‌ಧನ್‌ ಯೋಜನೆ ಹಾಗೂ ವ್ಯಾಪಾರಿಗಳು ಹಾಗೂಸ್ವಯಂ ಉದ್ಯೋಗಿಗಳಿಗೆ ರಾಷ್ಟ್ರೀಯ ಪಿಂಚಣಿಯೋಜನೆಯ ಮಾಹಿತಿ ನೀಡುವ ಉದ್ದೇಶದಿಂದಜಾಗೃತಿ ವಾಹನ ಜಿಲ್ಲೆಯಾದ್ಯಂತ ಸಂಚರಿಸಲಿದೆ ಎಂದರು.

ಈ ಸಂಚಾರಿ ರಥ ಪ್ರದರ್ಶನವು ಜನವರಿ 4ರಿಂದ 18 ರವರೆಗೆ ಜಿಲ್ಲೆಯ ಎಲ್ಲಾ ತಾಲೂಕು ಮತ್ತು ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದೆ. ದೇಶದ ಅರ್ಧದಷ್ಟು ಆದಾಯವು ಅಸಂಘಟಿತ ವಲಯದ 42ಕೋಟಿ ಕಾರ್ಮಿಕರಿಂದ ಉತ್ಪಾನೆಯಾಗುತ್ತಿದೆ. ಬೀದಿ ಬದಿ ವ್ಯಾಪಾರಿಗಳು, ಮನೆಗೆಲಸದವರು, ಬಿಸಿಯೂಟತಯಾರಿಸುವವರು, ಹಮಾಲಿಗಳು, ಇಟ್ಟಿಗೆ ಭಟ್ಟಿಕಾರ್ಮಿಕರು, ಚಮ್ಮಾರರು, ಚಿಂದಿ ಆಯುವವರು, ಅಗಸರು, ರಿಕ್ಷಾ ಚಾಲಕರು, ಭೂರಹಿತ ಕಾರ್ಮಿಕರು, ಸ್ವಯಂ ಉದ್ಯೋಗಿಗಳು, ಕೃಷಿ ಕಾರ್ಮಿಕರು,ಕಟ್ಟಡ ಕಾರ್ಮಿಕರು, ಬೀಡಿ ಕಾರ್ಮಿಕರು, ಕೈಮಗ್ಗಕಾರ್ಮಿಕರು, ಚರ್ಮೋದ್ಯಮದ ಕಾರ್ಮಿಕರು, ಧ್ವನಿಮತ್ತು ದೃಶ್ಯ ಕಾರ್ಮಿಕರು ಮತ್ತು ಇದೇ ರೀತಿಯಇತರೆ ಕಾರ್ಮಿಕರಿಗೆ ಇಳಿವಯಸ್ಸಿನಲ್ಲಿ ಸಾಮಾಜಿಕಭದ್ರತೆ ಕಲ್ಪಿಸಲು ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್‌ಧನ್‌ ಯೋಜನೆಗೆ ಚಾಲನೆನೀಡಿದೆ ಎಂದರು.

ಈ ಯೋಜನೆಗೆ ಒಳಪಡುವ ಕಾರ್ಮಿಕರುಅಸಂಘಟಿತ ವಲಯದ ಕಾರ್ಮಿಕರಾಗಿದ್ದು, 18ರಿಂದ 40 ವರ್ಷದೊಳಗಿರಬೇಕು. ಅವರ ಮಾಸಿಕಆದಾಯ 15 ಸಾವಿರ ರೂ. ಹಾಗೂ ಅದಕ್ಕಿಂತ ಕಡಿಮೆಇರಬೇಕು. ಆದಾಯ ತೆರಿಗೆ ಅಥವಾ ಇಎಸ್‌ಐಅಥವಾ ಪಿಎಫ್‌, ಎನ್‌ಪಿಎಸ್‌ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿರಬಾರದು ಎಂದು ತಿಳಿಸಿದರು.

Advertisement

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸಿ.ಸಂಗಪ್ಪ, ಜಿಲ್ಲಾ ವಾರ್ತಾಧಿಕಾರಿ ಬಿ.ಧನಂಜಯ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next