Advertisement

ವಿಷಮಶೀತ ಜ್ವರ ಹೆಚ್ಚಾಗುತ್ತಿರುವ 13 ಜಿಲ್ಲೆಯಲ್ಲಿ ನಿಯಂತ್ರಣಕ್ಕೆ ಸೂಚನೆ

10:10 PM Apr 07, 2021 | Team Udayavani |

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಎರಡನೇ ಅಲೆ ನಿರೀಕ್ಷೆ ಮೀರಿ ಹರಡುತ್ತಿದೆ. ವಿಷಮಶೀತ ಜ್ವರ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ 13 ಜಿಲ್ಲೆಗಳ ಜಿಲ್ಲಾಡಳಿತಗಳಿಗೆ ಸ್ಪಷ್ಟ ಮಾರ್ಗಸೂಚಿಗಳನ್ನು ನೀಡಿ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಸಚಿವ ಡಾ.ಕೆ. ಸುಧಾಕರ್‌ ಹೇಳಿದರು.

Advertisement

ವಿಕಾಸಸೌಧದಲ್ಲಿ ಬುಧವಾರ 13 ಜಿಲ್ಲೆಗಳ ಜಿಲ್ಲಾಡಳಿತಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಷಮಶೀತ ಜ್ವರ (ಐಎಲ್‌ಐ) ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ 13 ಜಿಲ್ಲೆಗಳಲ್ಲಿ ಪ್ರಕರಣಗಳ ಸಂಖ್ಯೆ ತಡೆಗೆ ಸ್ಪಷ್ಟ ಮಾರ್ಗಸೂಚಿಗಳನ್ನು ನೀಡಲಾಗಿದೆ. ಹಾಗೆಯೇ ಕೇಂದ್ರ ಆರೋಗ್ಯ ಸಚಿವರು ನೀಡಿರುವ ಸಲಹೆಗಳ ಬಗ್ಗೆಯೂ ಜಿಲ್ಲಾಡಳಿತಗಳಿಗೆ ತಿಳಿಸಲಾಗಿದೆ ಎಂದು ಹೇಳಿದರು.

ಕೋವಿಡ್‌ ಎರಡನೇ ಅಲೆ ನಮ್ಮ ನಿರೀಕ್ಷೆ ಮೀರಿ ಹರಡುತ್ತಿದ್ದು, ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಆಸ್ಪತ್ರೆಗಳಲ್ಲಿಲ್ಲಿ ಹಾಸಿಗೆ ವ್ಯವಸ್ಥೆಯ ಕೊರತೆಯಾಗಲಿದೆ. ಹರಡುವಿಕೆ ಪ್ರಮಾಣದ ವೇಗ ಆಧರಿಸಿ ಐಸಿಯು ಹಾಸಿಗೆಗಳ ಅಗತ್ಯದ ಬಗ್ಗೆಯೂ ಅಂದಾಜು ಮಾಡಿ, ವ್ಯವಸ್ಥೆ ಕಲ್ಪಿಸಲು ಪ್ರಯತ್ನ ನಡೆದಿದೆ. ಎಲ್ಲರೂ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಜನ ಸ್ವಯಂ ನಿರ್ಬಂಧ ಹಾಕಿಕೊಳ್ಳಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ : ಸುಬ್ರಹ್ಮಣ್ಯ : ಕೆದಿಲ ಬಳಿ ಕಾಡಾನೆಗಳ ಹಿಂಡು ಪ್ರತ್ಯಕ್ಷ : ಆತಂಕದಲ್ಲಿ ಸ್ಥಳೀಯರು

ಲಸಿಕೆ ಹಾಕುವ ಕಾರ್ಯವನ್ನು ಇನ್ನಷ್ಟು ವ್ಯಾಪಕವಾಗಿ ಕೈಗೊಳ್ಳಲು ಸೂಚಿಸಲಾಗಿದೆ. ಈವರೆಗೆ 50 ಲಕ್ಷಕ್ಕೂ ಹೆಚ್ಚು ಮಂದಿಗೆ ಲಸಿಕೆ ಡೋಸ್‌ ಹಾಕಲಾಗಿದ್ದು, ಶೀಘ್ರವಾಗಿ ಒಂದು ಕೋಟಿ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಉದ್ಯೋಗಸ್ಥರಿಗೆ ಅವರ ಸ್ಥಳಗಳಲ್ಲೇ ಲಸಿಕೆ ನೀಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಅದರಂತೆ 45 ವರ್ಷ ಮೀರಿದ 100ಕ್ಕಿಂತ ಹೆಚ್ಚು ಉದ್ಯೋಗಿಗಳಿರುವ ಕಡೆ ಇಲಾಖೆಯಿಂದಲೇ ಲಸಿಕೆ ಹಾಕಲು ನಿರ್ಧರಿಸಲಾಗಿದ್ದು, ಗುರುವಾರದಿಂದಲೇ ನಿರ್ದಿಷ್ಟ ಸಂಖ್ಯೆ ಉದ್ಯೋಗಿಗಳಿರುವ ಕಡೆ ಇಲಾಖೆಯೇ ತೆರಳಿ ಲಸಿಕೆ ನೀಡಲಿದೆ ಎಂದು ಹೇಳಿದರು.

Advertisement

ಆತಂಕ ಮೂಡಿಸಿದೆ!
ರಾಜ್ಯಾದ್ಯಂತ ಬುಧವಾರ 6970 ಪ್ರಕರಣಗಳು ವರದಿಯಾಗಿದ್ದು, ಬೆಂಗಳೂರಿನಲ್ಲಿ ಪ್ರಕರಣ ಹೆಚ್ಚಾಗುತ್ತಿರುವ ಬಗ್ಗೆ ಆತಂಕ ಇದ್ದೇ ಇದೆ. ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ ಜಿಲ್ಲಾಡಳಿತಗಳೊಂದಿಗೆ ಗುರುವಾರ ಸಭೆ ನಡೆಸಲಾಗುವುದು. ಹಾಗೆಯೇ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೂ ಗುರುವಾರ ಸಭೆಯಿದ್ದು, ಕೋವಿಡ್‌ ಚಿಕಿತ್ಸೆಗೆ ಬೆಡ್‌ಗಳನ್ನು ಕಾಯ್ದಿರಿಸುವ ಸಂಬಂಧ ಚರ್ಚಿಸಲಾಗುವುದು. ಸಂಜೆ 6.30ಕ್ಕೆ ಪ್ರಧಾನಿಯವರೊಂದಿಗೆ ಮುಖ್ಯಮಂತ್ರಿಗಳ ವಿಡಿಯೋ ಸಂವಾದವಿದೆ ಎಂದು ತಿಳಿಸಿದರು.

ಇದನ್ನೂ ಓದಿ:ಚಾ.ನಗರ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರನ್ನು ಬದಲಿಸುವಂತೆ ವಕೀಲರ ಸಂಘ ಆಗ್ರಹ

ಭವಿಷ್ಯ ಹೇಗೆ ಹೇಳಲಿ!
ಲಾಕ್‌ಡೌನ್‌ ಜಾರಿ ಅಗತ್ಯವೇ ಎಂಬ ಪ್ರಶ್ನೆಗೆ ಸಚಿವ ಡಾ.ಕೆ. ಸುಧಾಕರ್‌ ನೀಡಿದ ಉತ್ತರ ಅಚ್ಚರಿ ಮೂಡಿಸುವಂತಿತ್ತು. ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, “ನೋಡೋಣ. ನಾನು ಭವಿಷ್ಯ ಹೇಗೆ ಹೇಳಲಿ’ ಎಂದಷ್ಟೇ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next