Advertisement

ಸಾವಯವ ಕೃಷಿಗಾಗಿ ಜಾಗೃತಿ: ಬಿಜೆಪಿ ರೈತ ಮೋರ್ಚಾ ಕಾರ್ಯಕಾರಿಣಿ ನಿರ್ಣಯ

12:30 AM Jan 31, 2023 | Team Udayavani |

ಬೆಳಗಾವಿ: ರೈತರು ಸಾವಯವ ಕೃಷಿಗೆ ಆದ್ಯತೆ ನೀಡುವಂತೆ ದೇಶದ ಒಂದು ಲಕ್ಷ ಹಳ್ಳಿಗಳಲ್ಲಿ ಜಾಗೃತಿ ಅಭಿಯಾನ ನಡೆಸಲು ಬಿಜೆಪಿ ರೈತ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಯಿತು.

Advertisement

ನಗರದಲ್ಲಿ ಎರಡು ದಿನಗಳ ಕಾಲ ಜರಗಿದ ಬಿಜೆಪಿ ರೈತ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ಕೊನೆಯ ದಿನವಾದ ಸೋಮವಾರ ಸಭೆಯ ಸಮಾರೋಪದಲ್ಲಿ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿ ಬಿ.ಎಲ್‌. ಸಂತೋಷ, ಕೃಷಿ ಸಚಿವ ಬಿ.ಸಿ. ಪಾಟೀಲ್‌, ರೈತ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ರಾಜಕುಮಾರ ಚಾಹರ್‌ ಸಹಿತ ಅನೇಕರು ಹಲವು ಸಲಹೆಗಳನ್ನು ನೀಡಿದರು.

ಅಭಿಯಾನಕ್ಕೆ ಮೋದಿ ಚಾಲನೆ
ರೈತ ಮೋರ್ಚಾ ಪದಾ ಧಿಕಾರಿಗಳಿಗೆ ದಿಲ್ಲಿಯಲ್ಲಿ ಸಾವಯವ ಕೃಷಿ ಹಾಗೂ ಸಿರಿಧಾನ್ಯಗಳನ್ನು ಬೆಳೆಸುವುದರ ಬಗ್ಗೆ ತರಬೇತಿ ನೀಡಿ ಅಭಿಯಾನ ಆರಂಭಿಸಲಾಗುವುದು. ಉತ್ತರ ಪ್ರದೇಶದ ಗಂಗಾ ನದಿ ತಟದಲ್ಲಿರುವ ಶುಕ್ರತಾಲ್‌ನಲ್ಲಿ ಫೆಬ್ರವರಿ ಕೊನೆಯ ವಾರ ಅಭಿಯಾನಕ್ಕೆ ಪ್ರಧಾನಿ ಮೋದಿ, ಸಿಎಂ ಯೋಗಿ ಆದಿತ್ಯನಾಥ ಸೇರಿ ಹಲವರು ಚಾಲನೆ ನೀಡಲಿದ್ದಾರೆ. 5 ಕಿ.ಮೀ.ವರೆಗೆ ಪಾದಯಾತ್ರೆ ನಡೆಸಿ ರೈತರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ರಾಜಕುಮಾರ ಚಾಹರ್‌ ಹೇಳಿದರು.

ರೈತ ಮೋರ್ಚಾ ರಾಜ್ಯಾಧ್ಯಕ್ಷ ಈರಣ್ಣ ಕಡಾಡಿ, ವಿಧಾನ ಪರಿಷತ್‌ ಸದಸ್ಯ ಎನ್‌. ರವಿಕುಮಾರ್‌ ಮುಂತಾದವರು ಉಪಸ್ಥಿತರಿದ್ದರು.

ಸಿರಿಧಾನ್ಯ: ಹೆಕ್ಟೇರ್‌ಗೆ 15 ಸಾ. ರೂ.
ಸಿರಿಧಾನ್ಯ ಬೆಳೆಯುವ ರೈತರ ಪ್ರತಿ ಹೆಕ್ಟೇರ್‌ಗೆ 15 ಸಾವಿರ ನೀಡುವಂತೆ ಸರಕಾರದ ಮೇಲೆ ಒತ್ತಡ ತರಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್‌ ತಿಳಿಸಿದರು.

Advertisement

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next