Advertisement

ಪೊಲೀಸ್‌ ಅಧಿಕಾರಿ, ಸಿಬ್ಬಂದಿಗೆ ಜಾಗೃತಿ: ಮಾಸ್ಕ್, ಸ್ಯಾನಿಟೈಸರ್‌ ಬಳಕೆಗೆ DYSP ಸಲಹೆ

12:24 PM May 01, 2020 | mahesh |

ಚಿಕ್ಕಬಳ್ಳಾಪುರ: ಕೋವಿಡ್ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ಲಾಕ್‌ಡೌನ್‌ ಅನುಷ್ಠಾನಕ್ಕೆ ಕೆಲಸ ಮಾಡುತ್ತಿರುವ ಪೊಲೀಸ್‌ ಅಧಿಕಾರಿ, ಸಿಬ್ಬಂದಿ ಹಾಗೂ ಗೃಹ ರಕ್ಷಕರು ಕಡ್ಡಾಯವಾಗಿ ಮಾಸ್ಕ್ ಹಾಗೂ ಸ್ಯಾನಿಟೈಸರ್‌ ಬಳಕೆ ಮಾಡಬೇಕು. ವಾಹನಗಳ ತಪಾಸಣೆ ವೇಳೆಯು ಅಂತರ ಕಾಯ್ದುಕೊಳ್ಳಬೇಕೆಂದು ಚಿಕ್ಕಬಳ್ಳಾಪುರ ಉಪ ವಿಭಾಗದ ಡಿವೈಎಸ್‌ಪಿ ರವಿಶಂಕರ್‌ ತಿಳಿಸಿದರು.

Advertisement

ನಗರ ಠಾಣೆ ಆವರಣದಲ್ಲಿ ಚಿಕ್ಕಬಳ್ಳಾಪುರ ಉಪ ವಿಭಾಗದ ಆರಕ್ಷಕ ಅಧಿಕಾರಿಗಳ ಹಾಗೂ ಸಿಬ್ಬಂದಿಗಳಿಗೆ ಕೋವಿಡ್ ಸೋಂಕು ಹರಡದಂತೆ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿ ಅವರು ಮಾತನಾಡಿ, ಲಾಕ್‌ಡೌನ್‌ನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಸೂಚಿಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೋವಿಡ್ ಸೋಂಕು ಹರಡದಂತೆ ತಡೆಯಲು ಅನೇಕ ಕಾರ್ಯಕ್ರಮಗಳನ್ನು ರೂಪಿಸಿದೆ. ವಿಶೇಷವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಘೋಷಣೆ ಆಗಿರುವ ಲಾಕ್‌ಡೌನ್‌ ವಿಚಾರದಲ್ಲಿ ಅಧಿಕಾರಿಗಳು ಪಾರದರ್ಶಕವಾಗಿ ಕೆಲಸ ಮಾಡಬೇಕು. ಯಾವುದೇ ಕಾರಣಕ್ಕೂ ತುರ್ತು ಸೇವೆಗಳು ಹೊರತುಪಡಿಸಿ ಅನವಶ್ಯಕವಾಗಿ ಜನರು ತಿರುಗಾಡದಂತೆ ನೋಡಿಕೊಳ್ಳಬೇಕೆಂದರು. ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರದ ಆರಕ್ಷಕ ವೃತ್ತ ನಿರೀಕ್ಷಕ ಸುರ್ದಶನ್‌ ಸೇರಿದಂತೆ ಚಿಕ್ಕಬಳ್ಳಾಪುರ ವಿಭಾಗದ ಎಲ್ಲಾ ಠಾಣೆಗಳ ಅಧಿಕಾರಿಗಳು, ಸಿಬ್ಬಂದಿ, ಗೃಹ ರಕ್ಷಕರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next