Advertisement

ಸಂತೆಯಲ್ಲಿ ಸಾರ್ವಜನಿಕರಿಗೆ ಜಾಗೃತಿ

12:57 PM Mar 18, 2020 | Suhan S |

ಗಜೇಂದ್ರಗಡ: ಪಟ್ಟಣದ ಪುರಸಭೆ ವತಿಯಿಂದ ಕೊರೊನಾ ವೈರಸ್‌ ಬಗ್ಗೆ ವಾರದ ಸಂತೆ ದಿನವಾದ ಮಂಗಳವಾರ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.

Advertisement

ಈ ವೇಳೆ ಪುರಸಭೆ ಆರೋಗ್ಯ ಅಧಿಕಾರಿ ರಾಘವೇಂದ್ರ ಮಂತಾ ಮಾತನಾಡಿ, ಇಡೀ ಜಗತ್ತನ್ನೆ ಬೆಚ್ಚಿ ಬೀಳಿಸಿದ ಕೊರೊನಾ ವೈರಸ್‌ ನಿಂದಾಗಿ ಸಾರ್ವಜನಿಕರು ಜಾಗೃತರಾಗಿರಬೇಕು. ಒಬ್ಬರಿಂದ ಮತ್ತೂಬ್ಬರಿಗೆ ಹರಡುವ ಈ ಸೋಂಕು ತಗುಲಿದ ವ್ಯಕ್ತಿಗಳಿಂದ ದೂರವಿರಬೇಕಿದೆ. ಕೊರೊನಾ ರೋಗದಲ್ಲಿ ಮುಖ್ಯವಾಗಿ ತೀವ್ರ ಜ್ವರ, ನೆಗಡಿ, ಕೆಮ್ಮು ಉಸಿರಾಟದ ತೊಂದರೆ ಹಾಗೂ ಭೇದಿ ಕಾಣಿಸಿಕೊಳ್ಳುತ್ತದೆ. ಯಾರಾದರೂ ಕೆಮ್ಮುವಾಗ, ಸೀನುವಾಗ ಬಾಯಿಗೆ ಕರವಸ್ತ್ರ ಅಡ್ಡ ಹಿಡಿಯುವುದು ಮತ್ತು ಕೈಯನ್ನು ಚೆನ್ನಾಗಿ ತೊಳೆದುಕೊಳ್ಳುವ ಮೂಲಕ ಸರಳ ನೈರ್ಮಲ್ಯ ಅಭ್ಯಾಸ ಮಾಡಿಕೊಳ್ಳಬೇಕು ಎಂದರು.

ಪ್ರಾಣಿಗಳ ನೇರ ಸಂಪರ್ಕ ಹಾಗೂ ಬೇಯಿಸದ ಕಚ್ಚಾ ಮಾಂಸ ಸೇವನೆ ಮಾಡಬೇಡಿ. ಶಂಕಿತ ರೋಗಿಯು ಮನೆಯಲ್ಲಿಯೇ ಪ್ರತ್ಯೇಕವಾಗಿರುವುದು ಮತ್ತು ಟ್ರಿಪಲ್‌ ಲೇಯರ್‌ ಮಾಸ್ಕ್ ಬಳಸಬೇಕಿದೆ. ಸಾರ್ವಜನಿಕ ಸ್ಥಳಗಳಲ್ಲಿ ಉಗುಳಬಾರದು. ಉಸಿರಾಟದ ತೊಂದರೆ ಕಂಡುಬಂದಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಎಂದರು.

ಈ ಸಂದರ್ಭದಲ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಧ್ವನಿವರ್ಧಕದ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು. ಪುರಸಭೆಯ ನಜೀರಸಾಬ್‌ ಸಾಂಗ್ಲಿಕಾರ, ಶಿವಕುಮಾರ ಇಲ್ಲಾಳ ಸೇರಿ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next