Advertisement
ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂಆಶಾ ಕಾರ್ಯಕರ್ತೆಯರು ಪ್ರತಿ ತಿಂಗಳ ಮೊದಲನೇ ಹಾಗೂ ಮೂರನೇ ಶುಕ್ರವಾರಗಳಂದು ಅವರ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಲ್ಲಿನ ಮನೆಗಳಿಗೆ ಭೇಟಿ ನೀಡಿ ನೀರು ಸಂಗ್ರಹಣೆಗಾಗಿ ಅಳವಡಿಸಿಕೊಂಡಿರುವ ವಿಧಾನಗಳನ್ನು ಪರಿಶೀಲಿಸುತ್ತಿದ್ದಾರೆ. ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿಯುಳ್ಳ ಕರಪತ್ರಗಳನ್ನು ವಿತರಿಸಿ, ಯಾವುದೇ ತರಹವಾದ ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ ನಿರ್ಲಕ್ಷ್ಯ ತೋರದೆ ವೈದ್ಯರಲ್ಲಿ ತಪಾಸಣೆಗೆ ಒಳಗಾಗಿ ಚಿಕಿತ್ಸೆ ಪಡೆಯುವಂತೆ ಸೂಕ್ತ ತಿಳಿವಳಿಕೆ ನೀಡಲಾಗುತ್ತಿದೆ. ಮನೆಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆ, ಕೊಳಚೆ ನೀರು ನಿಲ್ಲುವುದನ್ನು ತಡೆಗಟ್ಟಿ ಸ್ವಚ್ಛತೆ ಕಾಪಾಡಿಕೊಂಡು ಸಾಂಕ್ರಾಮಿಕ ರೋಗಗಳು ಸಂಭವಿಸುವುದನ್ನು ತಡೆಗಟ್ಟಬೇಕು ಎಂಬ ಅಂಶಗಳನ್ನು ಮನವರಿಕೆ ಮಾಡಿಕೊಡುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.
Advertisement
ಆರೋಗ್ಯ ಇಲಾಖೆಯಿಂದ ಜಾಗೃತಿ
01:12 PM Feb 08, 2020 | Suhan S |
Advertisement
Udayavani is now on Telegram. Click here to join our channel and stay updated with the latest news.