Advertisement

ಕಡ್ಡಾಯ ಮತದಾನಕ್ಕೆ ಬನ್ನೂರಿನಲ್ಲಿ ಜಾಗೃತಿ ಜಾಥಾ

07:44 AM Mar 17, 2019 | Team Udayavani |

ತಿ.ನರಸೀಪುರ: ತಾಲೂಕಿನ ಬನ್ನೂರು ಪಟ್ಟಣದಲ್ಲಿ ಕಡ್ಡಾಯ ಮತದಾನ ಮಾಡುವ ಬಗ್ಗೆ ಜಾಗೃತಿ ಮೂಡಿಸಲಾಯಿತು. ಸಾರ್ವಜನಿಕ ಆಸ್ಪತ್ರೆ ಮುಂಭಾಗದಿಂದ ವಿದ್ಯಾರ್ಥಿಗಳು ಜಾಗೃತಿ ಜಾಥಾ ನಡೆಸಿ, ಮತದಾನ ಮಹತ್ವದ ಕುರಿತು ಭಿತ್ತಿಪತ್ರಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.

Advertisement

ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ತಾಲೂಕು ಪಂಚಾಯ್ತಿ ಕಾರ್ಯನಿರ್ವಹಕ ಅಧಿಕಾರಿ ಡಾ. ನಂಜೇಶ್‌, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಹಬ್ಬದಂತಾಗಬೇಕು. ಕುಟುಂಬ ಸಮೇತ ಮತಗಟ್ಟೆಗೆ ಬಂದು ಕಡ್ಡಾಯವಾಗಿ ಮತ ಚಲಾಯಿಸಬೇಕು. ಯಾರೊಬ್ಬರೂ ಕೂಡ ಮತದಾನದಿಂದ ವಂಚಿತರಾಗಬಾರದು. ಚುನಾವಣೆಯಲ್ಲಿ ಪ‌ಕ್ಷ, ವ್ಯಕ್ತಿ ಅನ್ನುವುದಲ್ಲ ಮುಖ್ಯವಲ್ಲ.

ಮತದಾನ ನಮ್ಮ ಹಕ್ಕು ಎಂಬುದನ್ನು ಯಾರು ಮರೆಯಬಾರದು ಎಂದು ತಿಳಿಸಿದರು. ಉತ್ತಮ ಸಮಾಜಕ್ಕಾಗಿ ಯೋಗ್ಯ ಅಭ್ಯರ್ಥಿಯನ್ನು ಆರಿಸಬೇಕು. ಯಾವುದೇ ಆಸೆ, ಆಮಿಷಗಳಿಗೆ ಒಳಗಾಗಬಾರದು. ಪ್ರಾಮಾಣಿಕ ಹಾಗೂ ಪಾರದರ್ಶಕವಾಗಿ ಮತ ಚಲಾಯಿಸಬೇಕು. ಪ್ರಜಾಪ್ರಭುತ್ವ ಬಲಪಡಿಸಲು ಮತದಾನ ಅತ್ಯುತ್ತಮ ಅವಕಾಶವಾಗಿದೆ.

8 ವರ್ಷ ಪೂರ್ಣಗೊಂಡವರು ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಿಕೊಂಡಿರುವ ಪ್ರತಿಯೊಬ್ಬರೂ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು. ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸ್ವಾಮಿ, ಸಿಡಿಪಿಓ ಬಸವರಾಜು ಮಾತನಾಡಿದರು.  ನರೇಗಾ ಸಹಾಯಕ ನಿರ್ದೇಶಕ ನಿಂಗಯ್ಯ,  ಬಿಆರ್‌ಸಿ ಶಂಕರ್‌ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next