Advertisement

Students ಆತ್ಮಹತ್ಯೆ ತಡೆಗೆ ಕಾಲೇಜುಗಳಲ್ಲಿ ಜಾಗೃತಿ: ಸಚಿವ

11:09 AM Sep 20, 2024 | Team Udayavani |

ಬೆಂಗಳೂರು: ಪರೀಕ್ಷಾ ಒತ್ತಡ ಸೇರಿದಂತೆ ಮತ್ತಿತರ ಕಾರಣಗಳಿಂದ ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಗೆ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್‌ಒಪಿ) ಪ್ರಕಟಿಸಲು ನಿರ್ಧರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್‌ ತಿಳಿಸಿದರು.

Advertisement

ನಗರದ ಉನ್ನತ ಶಿಕ್ಷಣ ಪರಿಷತ್ತಿನಲ್ಲಿ ಗುರುವಾರ ನಡೆದ ಸಭೆಯ ಬಳಿಕ ಮಾತನಾಡಿದ ಅವರು, ಪರೀಕ್ಷೆ ಒತ್ತಡ ಮಾತ್ರವಲ್ಲದೆ, ಆನ್‌ಲೈನ್‌ ಗೇಮ್‌ಗಳಿಂದ ಹಣ ಕಳೆದು ಕೊಳ್ಳುವುದು, ಪ್ರೀತಿ-ಪ್ರೇಮ ಮತ್ತಿತರ ಪ್ರಕರಣಗಳಲ್ಲಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಕಂಡು ಬರುತ್ತಿದೆ. ಈ ಎಲ್ಲ ಕಾರಣದಿಂದ ಉನ್ನತ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳನ್ನು ಯಾವ ರೀತಿಯಲ್ಲಿ ಮನವರಿಕೆ ಮಾಡಿಕೊಡಬೇಕು ಮತ್ತು ಆತ್ಮಹತ್ಯೆ ಪ್ರಕರಣಗಳನ್ನು ತಪ್ಪಿಸಲು ಕೈಗೊಳ್ಳಬೇಕಾದ ಕ್ರಮ ಗಳ ಬಗ್ಗೆ ಈ ಎಸ್‌ ಒಪಿಯಲ್ಲಿ ತಿಳಿಸಲಾಗುತ್ತದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next