Advertisement

ಸ್ವೀಪ್‌ ಸಮಿತಿಯಿಂದ ಸಂತೆಯಲ್ಲಿ ಜಾಗೃತಿ

05:31 PM Apr 26, 2018 | Team Udayavani |

ಕಲಬುರಗಿ: ಜಿಲ್ಲಾ ಸ್ವೀಪ್‌ ಸಮಿತಿಯಿಂದ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ನಡೆಯುವ ಸಂತೆ ಪ್ರದೇಶಗಳಲ್ಲಿ ಕಡ್ಡಾಯ ಮತದಾನ ಹಾಗೂ ನೈತಿಕ ಮತದಾನದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ನಗರದ ಕಣ್ಣಿ ತರಕಾರಿ ಮಾರುಕಟ್ಟೆ ಹಾಗೂ ಬಸ್‌ ನಿಲ್ದಾಣದಲ್ಲಿ ಜಿಲ್ಲಾ ಸ್ವೀಪ್‌ ಸಮಿತಿ ತಂಡವು ಕರಪತ್ರಗಳನ್ನು ಹಂಚುವ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸಿದರು.

Advertisement

ಮೇ 12ರಂದು ವಿಧಾನಸಭೆ ಚುನಾವಣೆಯ ಮತದಾನ ನಡೆಯಲಿದ್ದು, ಮನೆಯಲ್ಲಿ ಯಾರೂ ಕೂಡದೇ ಮತಗಟ್ಟೆಗಳಿಗೆ ತೆರಳಿ ಕಡ್ಡಾಯವಾಗಿ ಮತ ಚಲಾಯಿಸಬೇಕು. ಮುಂದಿನ 5 ವರ್ಷಗಳ ಸುಭದ್ರ ಸರ್ಕಾರಕ್ಕಾಗಿ ಒಳ್ಳೆಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂವಿಧಾನ ಮತದಾನವೆಂಬ ಶಸ್ತ್ರವನ್ನು ನೀಡಿದ್ದು, ಇದನ್ನು ತುಂಬಾ ಸಮರ್ಥವಾಗಿ ಬಳಸಿಕೊಳ್ಳಬೇಕು. ಮತದಾನಕ್ಕಾಗಿ ಯಾವುದೇ ಆಸೆ-ಆಮಿಷಗಳಿಗೆ ಒಳಗಾಗದೇ ನೈತಿಕ ಮತದಾನ ಮಾಡಬೇಕು. ಮತದಾನ ಎಲ್ಲರ ಮೂಲಭೂತ ಹಕ್ಕು ಮತ್ತು ಕರ್ತವ್ಯವಾಗಿದೆ ಎಂದು ಮತದಾರರಲ್ಲಿ ಜಾಗೃತಿ ಮೂಡಿಸಲಾಯಿತು.

ಬಸ್‌ ನಿಲ್ದಾಣದಲ್ಲಿ ಬಸ್ಸುಗಳಲ್ಲಿ ಹಾಗೂ ಪ್ಲಾಟ್‌ಫಾರ್‌ಂ ನಲ್ಲಿ ಕುಳಿತಿರುವ ಪ್ರಯಾಣಿಕರಿಗೆ ಸಹ ಮತದಾನದ ಜಾಗೃತಿ ಮೂಡಿಸಲಾಯಿತು. ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷೆ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅ ಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಹ್ಮದ್‌ ಯುಸೂಫ್‌ ಮತ್ತಿತರರು ಪಾಲ್ಗೊಂಡಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next