Advertisement

ಬಾಲ್ಯವಿವಾಹ ತಡೆಗೆ ಜಾಗೃತಿ ಅವಶ್ಯಕ: ಡೀಸಿ

10:05 AM Jan 24, 2023 | Team Udayavani |

ಚಾಮರಾಜನಗರ: ಬಾಲ್ಯವಿವಾಹ ದಿಂದಾಗುವ ಪರಿಣಾಮಗಳ ಕುರಿತು ಸಮುದಾಯದಲ್ಲಿ ಜಾಗೃತಿ ಮೂಡಿಸುವ ಮೂಲಕ ಬಾಲ್ಯವಿವಾಹ ಪ್ರಕರಣಗಳನ್ನು ತಡೆಯಬೇಕೆಂದು ಜಿಲ್ಲಾಧಿಕಾರಿ ಡಿ.ಎಸ್‌. ರಮೇಶ್‌ ಹೇಳಿದರು.

Advertisement

ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಇತರೆ ಇಲಾಖೆಗಳ ಸಹಯೋಗ ದೊಂದಿಗೆ ಬಾಲ್ಯವಿವಾಹ ನಿಷೇಧ ಕುರಿತು ಆಯೋಜಿಸ ಲಾಗಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಭಾವನಾತ್ಮಕ ವಿಚಾರಗಳ ಬಗ್ಗೆ ಅತ್ಯಂತ ಸೂಕ್ಷ್ಮತೆ ಇರಬೇಕಿದೆ. ಬಾಲ್ಯವಿವಾಹ ನಡೆಯುವ ಹಂತದವರೆಗಿನ ಮುಂಚೆಯೇ ಪರಿಣಾಮಕಾರಿ ಯಾಗಿ ಜಾಗೃತಿ ಮೂಡಿಸಿದರೆ ಬಾಲ್ಯವಿವಾಹವನ್ನು ತಡೆಗಟ್ಟಬಹುದು. ಹೀಗಾಗಿ ಅಧಿಕಾರಿಗಳು ಬಾಲ್ಯವಿವಾಹದಿಂದ ಆಗುವ ಪರಿಣಾಮಗಳ ಕುರಿತು ಮನವರಿಕೆ ಮಾಡಿಕೊಡಬೇಕೆಂದು ಹೇಳಿದರು.

ಬಾಲ್ಯವಿವಾಹದಂತಹ ಪದ್ಧತಿ ಹೋಗಲಾಡಿಸಲು ಜನರನ್ನು ಮನವೊಲಿಸ ಬೇಕು. ಆರಂಭದಲ್ಲಿ ಪ್ರತಿರೋಧ ಸಹಜವಾಗಿಯೇ ಇರುತ್ತದೆ. ಜನರಲ್ಲಿ ತಿಳಿವಳಿಕೆ ಮೂಡಿಸಿದಾಗ ಪ್ರಕರಣಗಳು ಇಳಿಮುಖವಾಗುತ್ತವೆ. ಕಾಯ್ದೆಗಳ ಬಗ್ಗೆಯೂ ಹೆಚ್ಚು ಅರಿವು ಮೂಡಿಸಬೇಕಿದೆ ಎಂದು ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್‌ ನ್ಯಾಯಾಧೀಶ ರಾದ ಎಂ.ಶ್ರೀಧರ ಮಾತನಾಡಿ, ಬಾಲ್ಯವಿವಾಹ ಪ್ರಕರಣಗಳಲ್ಲಿ ಜಿಲ್ಲೆ ಕಳೆದ ನಾಲ್ಕು ತಿಂಗಳ ಹಿಂದೆ ಏಳನೇ ಸ್ಥಾನದಲ್ಲಿತ್ತು. ಜಿಲ್ಲೆಯನ್ನು ಬಾಲ್ಯವಿವಾಹ ಕಳಂಕರಹಿತ ಜಿಲ್ಲೆಯನ್ನಾಗಿಸಲು ಬಾಲ್ಯವಿವಾಹ ನಿಷೇಧ ಕಾರ್ಯದಲ್ಲಿ ತೊಡಗಿಕೊಂಡಿರುವ ಎಲ್ಲರೂ ಪಣತೊಡಬೇಕಿದೆ ಎಂದರು.

Advertisement

ಡಿವೈಎಸ್‌ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ಜಿಪಂ ಉಪಕಾರ್ಯದರ್ಶಿ ಧರಣೇಶ್‌, ಮುಖ್ಯ ಲೆಕ್ಕಾಧಿಕಾರಿ ಎಚ್‌.ಎಸ್‌. ಗಂಗಾಧರ್‌, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಸರಸ್ವತಿ, ಮೈಸೂರಿನ ಒಡಿಪಿ ಸಂಸ್ಥೆಯ ಧನರಾಜ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕಿ ಗೀತಾಲಕ್ಷ್ಮೀ ಇದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next