Advertisement
ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಜಿಲ್ಲಾ ಆಸ್ಪತ್ರೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಹಮ್ಮಿಕೊಂಡಿದ್ದ ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕ್ಷಯರೋಗ ಬಗ್ಗೆ ಭಯ ಪಡುವ ಅಗತ್ಯವಿಲ್ಲ. ನಿರಂತರ ಔಷಧ ಸೇವಿಸುವುದರಿಂದ ರೋಗ ಪೂರ್ಣ ಗುಣಮುಖವಾಗುತ್ತದೆ ಎಂದರು.
Related Articles
Advertisement
ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ|ತನುಜಾ.ಕೆ.ಎನ್ ಮಾತನಾಡಿ, ಜಿಲ್ಲೆಯಲ್ಲಿ ಕ್ಷಯರೋಗ ಪತ್ತೆಗಾಗಿ ಎಂಟು ಘಟಕಗಳಿವೆ. ಈಗಾಗಲೇ 1835 ಕ್ಷಯರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪ್ರತಿ ತಿಂಗಳು 1000-1500 ಸಂಶಯಾಸ್ಪದ ಕ್ಷಯರೋಗಿಗಳ ಪರೀಕ್ಷೆ ಮಾಡಲಾಗುತ್ತಿದೆ. ಪ್ರಸ್ತುತ ವಿಶೇಷ ಅಭಿಯಾನದಲ್ಲಿ ಹೆಚ್ಚು ಜನರನ್ನು ಪರೀಕ್ಷಿಸುವ ಗುರಿ ಹೊಂದಲಾಗಿದೆ. ಅಭಿಯಾನ ಯಶಸ್ವಿಗೊಳಿಸಲು 284 ತಂಡ ರಚಿಸಲಾಗಿದೆ. ಇದರಲ್ಲಿ ಆಶಾ, ಆರೋಗ್ಯ ಕಾರ್ಯಕರ್ತರು, ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಸೇರಿದಂತೆ ಒಟ್ಟು 568 ಜನ ಪಾಲ್ಗೊಳ್ಳಲಿದ್ದಾರೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಡಾ|ಯಶವಂತ ಮದೀನಕರ ಮಾತನಾಡಿ, ಕ್ಷಯರೋಗ ನಿಯಂತ್ರಣಕ್ಕಾಗಿ ಇಲಾಖೆಯಿಂದ ಹಲವಾರು ಯೋಜನೆ ಜಾರಿಗೊಳಿಸಲಾಗಿದೆ. ಕ್ಷಯರೋಗಿಗಳಿಗೆ ಚಿಕಿತ್ಸೆ ಅವಧಿ ಪೂರ್ಣಗೊಳ್ಳುವರೆಗೆ ಪ್ರತಿ ತಿಂಗಳು ನಿಕ್ಷಯ ಪೋಷಣೆ ಯೋಜನೆಯಡಿ 500 ರೂ.ಗಳ ಸಹಾಯಧನ ನೀಡಲಾಗುತ್ತಿದೆ. ಕ್ಷಯರೋಗಿಯನ್ನು ಗುರುತಿಸುವ ಖಾಸಗಿ ವೈದ್ಯರಿಗೆ 500 ರೂ.ಗಳ ಪ್ರೋತ್ಸಾಹ ಧನ ನೀಡಲಾಗುತ್ತಿದೆ ಎಂದರು.
ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ|ಶಿವಕುಮಾರ ಮಾನಕರ, ಆರ್.ಸಿ.ಎಚ್ ಅಧಿಕಾರಿ ಡಾ|ಎಸ್.ಎಂ.ಹೊನಕೇರಿ, ನಿವೃತ್ತ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ|ವಿ.ಡಿ. ಕಪೂರಮಠ, ಜಿಲ್ಲಾ ಸಮೀಕ್ಷಣಾಧಿ ಕಾರಿ ಡಾ|ಸುಜಾತಾ ಹಸವಿಮಠ, ಜಿಲ್ಲಾ ಕುಷ್ಠರೋಗ ನಿಯಂತ್ರಣಾ ಧಿಕಾರಿ ಡಾ|ಶಶಿ ಪಾಟೀಲ, ಜಿಲ್ಲಾಸ್ಪತ್ರೆಯ ವೈದ್ಯರು ಮತ್ತು ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು, ಸರ್ಕಾರೇತರ ಸಂಸ್ಥೆಗಳ ಪ್ರತಿನಿ ಧಿಗಳು ಭಾಗವಹಿಸಿದ್ದರು. ಕಾರ್ಯಕ್ರಮ ನಂತರ ಡಿಸಿ ದೀಪಾ ಚೋಳನ್ ಅವರು ಕ್ಷಯರೋಗ ಕುರಿತ ಜಾಗೃತಿ ಮಾಹಿತಿಯುಳ್ಳ ಸ್ಟಿಕರ್ ಅನ್ನು ತಮ್ಮ ಕಾರಿಗೆ ಅಂಟಿಸುವ ಮೂಲಕ ಐಇಸಿಸಾಮಗ್ರಿಗಳ ವಿತರಣೆಗೆ ಜಿಪಂ ಸಿಇಒ ಡಾ|ಬಿ.ಸಿ.ಸತೀಶ ಅವರೊಂದಿಗೆ ಚಾಲನೆ ನೀಡಿದರು.