Advertisement

ತಂಬಾಕು ಸೇವನೆ ನಿಯಂತ್ರಣಕ್ಕೆ ಜಾಗೃತಿ ಅಗತ್ಯ

09:28 PM Dec 23, 2019 | Lakshmi GovindaRaj |

ಚಿಕ್ಕಬಳ್ಳಾಪುರ: ತಂಬಾಕು ಸೇವನೆಯಿಂದ ಮನುಷ್ಯನ ಆರೋಗ್ಯದ ಮೇಲೆ ಉಂಟಾಗುವ ದುಷ್ಟಪರಿಣಾಮಗಳ ಬಗ್ಗೆ ಜನಸಾಮಾನ್ಯರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕೆಂದು ಅಪರ ಜಿಲ್ಲಾಧಿಕಾರಿ ಆರತಿ ತಿಳಿಸಿದರು.

Advertisement

ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮದ ತ್ರೆçಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪರಿಣಾಮಕಾರಿಯಾಗಿ ಜಾರಿಯಾಗಬೇಕು: ಸಾರ್ವಜನಿಕ ಸ್ಥಳಗಳಲ್ಲಿ, ಶಾಲಾ-ಕಾಲೇಜುಗಳಲ್ಲಿ ಹಾಗೂ ಚಿಕ್ಕ ಚಿಕ್ಕ ಅಂಗಡಿ ಮುಂಗಟ್ಟುಗಳಲ್ಲಿ ತಂಬಾಕಿನ ವಿವಿಧ ಉತ್ಪನ್ನಗಳನ್ನು ಸೇವನೆ ಮಾಡುವುದನ್ನು ನಿಷೇಧ ಮಾಡುವುದು ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮವು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಜಾರಿಯಾಗಬೇಕು ಎಂದರು.

ಈಗಾಗಲೇ 6 ತಾಲೂಕುಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಬಿಡಿ ಬಿಡಿಯಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಜಾಲಗಳನ್ನು ಪತ್ತೆ ಮಾಡಿ ಸೆರೆ ಹಿಡಿಯಲಾಗಿದೆ. ಶಾಲಾ ಕಾಲೇಜುಗಳಲ್ಲಿ ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಗಿದೆ ಎಂದರು.

ಮನವರಿಕೆ: ಮುಂದಿನ ದಿನಗಳಲ್ಲಿ ಮತ್ತಷ್ಟು ಪರಿಣಾಮಕಾರಿಯಾದಂತಹ ಕಾರ್ಯಕ್ರಮಗಳನ್ನು ಹಾಕಿಕೊಂಡು ಸಾರ್ವಜನಿಕರಿಗೆ ತಂಬಾಕು ಉತ್ಪನ್ನಗಳ ಸೇವನೆಯಿಂದ ಆಗುವ ಅಪಾಯಗಳ ಬಗ್ಗೆ ವಿದ್ಯಾರ್ಥಿ, ಯುವ ಜನಾಂಗಕ್ಕೆ ಮನವರಿಕೆ ಮಾಡಬೇಕಾಗಿದೆ. ಚಿಲ್ಲರೆ ಅಂಗಡಿಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧ ಬಗ್ಗೆ ಕಡ್ಡಾಯವಾಗಿ ಸಾರ್ವಜನಿಕರಿಗೆ ಅರಿವು ಉಂಟಾಗುವಂತೆ ಪ್ರದರ್ಶನ ಫ‌ಲಕಗಳನ್ನು ಹಾಕಬೇಕೆಂದು ಹೇಳಿದರು.

Advertisement

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ. ಎಂ.ಯೋಗೇಶ್‌ಗೌಡ, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ಯಲ್ಲಾ ರಮೇಶ್‌ಬಾಬು, ಜಿಲ್ಲಾಸ್ಪತ್ರೆಯ ನಿವಾಸಿ ವೈದ್ಯ ಡಾ.ರಮೇಶ್‌, ಡಾ.ಪ್ರಕಾಶ್‌ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

29ಕ್ಕೆ ವಿಶ್ವ ಮಾನವ ದಿನಾಚರಣೆ
ಚಿಕ್ಕಬಳ್ಳಾಪುರ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಡಿ.29ರಂದು ರಾಷ್ಟ್ರಕವಿ ಕುವೆಂಪು ಆಶಯಗಳೊಂದಿಗೆ ವಿಶ್ವ ಮಾನವ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಬೇಕೆಂದು ಅಪರ ಜಿಲ್ಲಾಧಿಕಾರಿ ಆರತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಸೋಮವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2019-20ನೇ ಸಾಲಿನಲ್ಲಿ ವಿಶ್ವ ಮಾನವ ಜಯಂತಿ ಆಚರಿಸುವ ಪ್ರಯುಕ್ತ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಶ್ವ ಮಾನವ ಜಯಂತಿ ಆಚರಣೆ ಕಾರ್ಯಕ್ರಮವನ್ನು ನಗರದ ಅಂಬೇಡ್ಕರ್‌ ಭವನದಲ್ಲಿ ಆಚರಿಸಲಾಗುವುದು ಎಂದರು.

ಮಳಿಗೆ ತೆರೆಯಲಾಗುವುದು: ಕಾರ್ಯಕ್ರಮದ ಆಹ್ವಾನ ಪತ್ರಿಕೆಗಳನ್ನು ಪ್ರತಿ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಎಲ್ಲಾ ಸಾಹಿತಿಗಳು ಮತ್ತು ಸಂಘ ಸಂಸ್ಥೆಗಳ ಪದಾಧಿಕಾರಿಗಳಿಗೆ ನೀಡಿ ಆಹ್ವಾನಿಸಲಾಗುವುದು. ಕಾರ್ಯಕ್ರಮದಲ್ಲಿ ರಾಷ್ಟ್ರಕವಿ ಕುವೆಂಪು ಅವರ ವಿಚಾರಧಾರೆಗಳನ್ನೊಳಗೊಂಡ ಪುಸಕ್ತಗಳ ಸಂಗ್ರಹ ಮಳಿಗೆಗಳನ್ನು ತೆರೆಯಲಾಗುವುದು.

ಪ್ರಬಂದ, ಭಾಷಣ, ಚರ್ಚಾಸ್ಪರ್ಧೆಗಳನ್ನು ನಗರದ ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳಿಗೆ ಹಾಗೂ ಶಾಲೆಗಳಲ್ಲಿ ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಗುವುದು. ಕಾರ್ಯಕ್ರಮದಲ್ಲಿ ಪ್ಲಾಸ್ಟಿಕ್‌ನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದರು. ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಿ.ಎಂ. ರವಿಕುಮಾರ್‌, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ನಿಷೇಧವನ್ನು ಹಂತ ಹಂತವಾಗಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕಿದ್ದು, ಅದಕ್ಕಾಗಿ ಅಧಿಕಾರಿಗಳು ಸಾರ್ವಜನಿಕ ಸ್ಥಳಗಳಲ್ಲಿ ಇರುವ ಚಿಲ್ಲರೆ ಅಂಗಡಿ ಹಾಗೂ ಕಾಂಡಿಮೆಂಟ್ಸ್‌ಗಳ ಮೇಲೆ ಕಾರ್ಯಾಚರಣೆ ನಡೆಸಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು.
-ಆರತಿ, ಅಪರ ಜಿಲ್ಲಾಧಿಕಾರಿ

Advertisement

Udayavani is now on Telegram. Click here to join our channel and stay updated with the latest news.

Next