Advertisement

ವಿದ್ಯಾರ್ಥಿನಿಯರಿಂದ ಜಾಗೃತಿ ಜಾಥಾ

04:17 PM Jul 23, 2019 | Team Udayavani |

ಚಿತ್ರದುರ್ಗ: ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿಯರು ನಗರದ ಒನಕೆ ಓಬವ್ವ ವೃತ್ತದಲ್ಲಿ ಸೋಮವಾರ ಜಾಗೃತಿ ಜಾಥಾ ನಡೆಸಿದರು. ಅಮೂಲ್ಯವಾದ ನೀರನ್ನು ಅಪವ್ಯಯಗೊಳಿಸದೆ ಹಿತಮಿತವಾಗಿ ಬಳಸುವ ಮೂಲಕ ಜಲಮೂಲ ರಕ್ಷಣೆ ಮಾಡಬೇಕು ಎಂದು ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.

Advertisement

ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಿಂದ ತಲೆ ಮೇಲೆ ಖಾಲಿ ಕೊಡಗಳನ್ನಿಟ್ಟುಕೊಂಡು ಆಗಮಿಸಿದ ನೂರಾರು ವಿದ್ಯಾರ್ಥಿನಿಯರು, ಗಿಡ-ಮರಗಳನ್ನು ಕಡಿದು ಪರಿಸರ ನಾಶ ಮಾಡುತ್ತಿರುವುದರಿಂದ ಸಕಾಲಕ್ಕೆ ಮಳೆಯಾಗದೆ ಜಿಲ್ಲೆಯಲ್ಲಿ ತೀವ್ರ ಬರ ಆವರಿಸಿದೆ. ಇದರಿಂದಾಗಿ ಜನ-ಜಾನುವಾರುಗಳು ಸೇರಿದಂತೆ ಸಕಲ ಜೀವರಾಶಿಗಳು ತೊಂದರೆ ಅನುಭವಿಸುವಂತಾಗಿದೆ. ಹಾಗಾಗಿ ಜಲಮೂಲ ಉಳಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು ಎಂದು ಮನವಿ ಮಾಡಿದರು.

ಮಳೆ ನೀರನ್ನು ಭೂಮಿಯಲ್ಲಿ ಇಂಗಿಸಿದರೆ ಕೊಳವೆಬಾವಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗುತ್ತದೆ. ಆಗ ಬರಗಾಲದಲ್ಲಿ ಸ್ವಲ್ಪ ಮಟ್ಟಿಗೆ ನೀರು ದೊರೆಯುವಂತೆ ಮಾಡಬಹುದು. ಅದಕ್ಕಾಗಿ ಮೊದಲು ಜಲಮೂಲವನ್ನು ಕಂಡುಕೊಂಡು ಸಂರಕ್ಷಣೆ ಮಾಡಬೇಕೆಂದರು.

ಪರಿಸರ ತಜ್ಞ ಡಾ| ಎಚ್.ಎಸ್‌.ಕೆ. ಸ್ವಾಮಿ, ಸರ್ಕಾರಿ ವಿಜ್ಞಾನ ಕಾಲೇಜು ಪ್ರಾಧ್ಯಾಪಕ ಡಾ| ಕೆ.ಕೆ. ಕಾಮಾನಿ, ಲೇಖಕ ಆನಂದಕುಮಾರ್‌ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next