ಉಡುಪಿ: ಬಸವಣ್ಣ ಅವರು 12ನೇ ಶತಮಾನದಲ್ಲಿ ತಮ್ಮ ವಚನ ಸಾಹಿತ್ಯದ ಮೂಲಕ ಸಮಾಜದಲ್ಲಿ ಸಮಾನತೆ ತರಲು ಪ್ರಯತ್ನಿಸಿದ್ದಾರೆ ಎಂದು ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ| ಜಿ.ಎಸ್. ಚಂದ್ರಶೇಖರ್ ತಿಳಿಸಿದರು.
ಸಹಮತ ವೇದಿಕೆ ಹಾಗೂ ಬಾಲಕಿಯರ ಸರಕಾರಿ ಪ.ಪೂ. ಕಾಲೇಜಿನಲ್ಲಿ ‘ಮತ್ತೆ ಕಲ್ಯಾಣ’ ಎಂಬ ಕಾರ್ಯಕ್ರಮದ ಪೂರ್ವಭಾವಿಯಾಗಿ ಶುಕ್ರವಾರ ಆಯೋಜಿಸಿದ್ದ ವಚನಕಾರರ ಬದುಕು-ಬರಹದ ಅರಿವು ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಾಣೇಹಳ್ಳಿ ಮಠದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳ ನೇತೃತ್ವದಲ್ಲಿ ಹಮ್ಮಿಕೊಂಡ ‘ಮತ್ತೆ ಕಲ್ಯಾಣ’ ಕಾರ್ಯಕ್ರಮ ಜಿಲ್ಲೆಯಲ್ಲಿ ಹೊಸ ಕ್ರಾಂತಿ ಸೃಷ್ಟಿ ಮಾಡಲಿ ಎಂದರು.
ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ| ನಿಕೇತನಾ, ರುದ್ರಪ್ಪ ಅವರು ‘ವಚನಕಾರರ ಬದುಕು-ಬರಹದ ಅರಿವು’ ಎಂಬ ವಿಷಯದ ಕುರಿತು ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಿದರು.
ಮತ್ತೆ ಕಲ್ಯಾಣ ಕಾರ್ಯಕ್ರಮದ ಸಂಚಾಲಕ ಚಿಟ್ನಳ್ಳಿ ಮಹೇಶ್, ನಿವೃತ್ತ ಪ್ರಾಂಶುಪಾಲ ಮೇಟಿ ಮುದಿಯಪ್ಪ, ಬಾಲಕಿಯರ ಸರಕಾರಿ ಪ.ಪೂ. ಕಾಲೇಜಿನ ಪ್ರಭಾರ ಪ್ರಾಂಶುಪಾಲ ಯಾದವ ವಿ., ಶರಣ ಸಾಹಿತ್ಯ ಜಿಲ್ಲಾಧ್ಯಕ್ಷ ಡಾ| ನಿರಂಜನ್ ಮೂರ್ತಿ ಉಪಸ್ಥಿತರಿದ್ದರು. ಉಪನ್ಯಾಸಕ ಪ್ರಕಾಶ ಶೆಟ್ಟಿ ಸ್ವಾಗತಿಸಿದರು ನಾಗರಾಜ್ ಅವರು ಕಾರ್ಯಕ್ರಮ ನಿರ್ವಹಿಸಿದರು.