Advertisement
ಬಡತನ, ಅನಕ್ಷರತೆ ಹೀಗೆ ಅನೇಕ ಕಾರಣಗಳಿಂದ ಮಕ್ಕಳು ಬಾಲ ಕಾರ್ಮಿಕ ಪದ್ಧತಿಯಲ್ಲಿ ತೊಡಗಿಕೊಂಡಿದ್ದಾರೆ. ಮಕ್ಕಳ ಓದು ಹಾಗೂ ಆಟೋಟಕ್ಕೆ ಮುಕ್ತ ವಾತಾವರಣ ಬೇಕು. ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ಮಾಡುವಲ್ಲಿ ತಂದೆ, ತಾಯಿಯರ ಪಾತ್ರ ಮುಖ್ಯವಾಗಿದೆ ಎಂದರು. ಮಕ್ಕಳ ರಕ್ಷಣೆ ಕೇವಲ ತಂದೆ-ತಾಯಿ ಯರ ಜವಾಬ್ದಾರಿಯಲ್ಲ. ಸರ್ಕಾರ ಸಹ ಮಕ್ಕಳ ರಕ್ಷಣೆಗೆ ಸದಾ ಸಿದ್ಧವಿದೆ. 14 ವರ್ಷದ ಮಕ್ಕಳಿಗೆ ಕಡ್ಡಾಯ ಉಚಿತ ಶಿಕ್ಷಣ ನೀಡಲಾಗುತ್ತಿದೆ. ಕೋವಿಡ್‌ನಲ್ಲಿ ತಂದೆ-ತಾಯಿ ಕಳೆದುಕೊಂಡ ಮಕ್ಕಳಿಗೆ ಆರ್ಥಿಕವಾಗಿ ತೊಂದರೆಯಾಗದಂತೆ ಸರ್ಕಾರದಿಂದ ಪ್ರತಿ ತಿಂಗಳು ಧನ ಸಹಾಯ ಮಾಡಲಾಗುತ್ತಿದೆ. ಮಕ್ಕಳು ನಮ್ಮ ಸಂಸ್ಕೃತಿ, ಪರಂಪರೆ ಮುನ್ನಡೆಸಿ ಕೊಂಡು ಹೋಗುವ ಪ್ರಜೆಗಳಾಗಿದ್ದಾರೆ. ನಿಮ್ಮ ಸುತ್ತಮುತ್ತ ಬಾಲ ಕಾರ್ಮಿಕರು ಕಂಡುಬಂದಲ್ಲಿ ಉಚಿತ ಮಕ್ಕಳ ಸಹಾಯವಾಣಿ 1098ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕು. ಮಕ್ಕಳ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದು ಹೇಳಿದರು.
Related Articles
Advertisement
ಕಾರ್ಯಕ್ರಮದಲ್ಲಿ ಎಸ್ಪಿ ಹನುಮಂತರಾಯ, ಜಿಪಂ ಸಿಇಒ ಮಹಮ್ಮದ ರೋಷನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ, ಜಿಲ್ಲಾ ಮಕ್ಕಳ ರಕ್ಷಣಾ ಕಾರಿ ಜಯಶ್ರೀ ಪಾಟೀಲ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅಶೋಕ ನೀರಲಗಿ, ಕಾರ್ಯದರ್ಶಿ ಈಶ್ವರ ನಂದಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಸೂರ್ಯಪ್ಪ ಡೊಂಬರಮತ್ತೂರು, ಕಾರ್ಮಿಕ ನಿರೀಕ್ಷಕ ರಾದ ಲತಾ ಟಿ.ಎಸ್., ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ರಾಘವೇಂದ್ರ ಶಿರೂರು ಇದ್ದರು.
ಪಾಲಕರು ತಮ್ಮ ಬಡತನದ ಸಮಸ್ಯೆಗೆ ಮಕ್ಕಳನ್ನು ಬಾಲಕಾರ್ಮಿಕರನ್ನಾಗಿ ಮಾಡಿದಲ್ಲಿ ಆ ಮಕ್ಕಳು ದೈಹಿಕ ಮತ್ತು ಮಾನಸಿಕವಾಗಿ ಕುಗ್ಗುತ್ತಾರೆ. ಸರ್ಕಾರದ ಸೌಲಭ್ಯಗಳನ್ನು ಪಡೆದು ಮಕ್ಕಳಿಗೆ ಶಿಕ್ಷಣ ನೀಡುವ ಕಾರ್ಯ ಮಾಡಬೇಕು. ಎಲ್ಲ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿದಲ್ಲಿ ಮಕ್ಕಳು ಬಾಲ ಕಾರ್ಮಿಕರಾಗುವುದನ್ನು ತಡೆಯಬಹುದು. –ಸಂಜಯ ಶೆಟ್ಟೆಣ್ಣವರ, ಜಿಲ್ಲಾಧಿಕಾರಿ