Advertisement

“ಗ್ರಾಹಕರ ಹಕ್ಕುಗಳ ಬಗ್ಗೆ ಪ್ರತಿಯೊಬ್ಬರಲ್ಲಿ ಜಾಗೃತಿ ಅಗತ್ಯ’

12:30 AM Mar 18, 2019 | Team Udayavani |

ಮಡಿಕೇರಿ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ, ವಕೀಲರ ಸಂಘ, ಗ್ರಾಹಕರ ವೇದಿಕೆ ಇವುಗಳ ವತಿಯಿಂದ ಮತದಾನದ ಮಹತ್ವ ಕುರಿತು ಜಾಗೃತಿ ಹಾಗೂ ಗ್ರಾಹಕರ ಹಕ್ಕುಗಳು ಮತ್ತು ರಕ್ಷಣೆ ಕುರಿತು ಮಾಹಿತಿ ಕಾರ್ಯಕ್ರಮವು ಶನಿವಾರ ನಗರದ ನ್ಯಾಯಾಲಯದ ಸಭಾಂಗಣದಲ್ಲಿ ನಡೆಯಿತು.   
 
ಪ್ರಧಾನ ಜಿಲ್ಲಾ ಮತ್ತು ಸೆಷನ್‌ ನ್ಯಾಯಾಧೀಶರಾದ ವಿ.ವಿ.ಮಲ್ಲಾಪುರ ಅವರು ಮಾತನಾಡಿ ಪ್ರಜಾಪ್ರಭುತ್ವ ಬಲಪಡಿಸುವ ನಿಟ್ಟಿನಲ್ಲಿ 18 ವರ್ಷ ಪೂರ್ಣಗೊಂಡವರೆಲ್ಲರೂ ಮತದಾನ ಮಾಡುವಂತಾಗಬೇಕು ಎಂದು ಅವರು ಕರೆ ನಿಡಿದರು. ಹದಿನೆಂಟು ವರ್ಷ ಪೂರ್ಣಗೊಂಡವರು ಮತದಾನ ಮಾಡುವುದು ತಮ್ಮ ಹಕ್ಕು ಎಂಬುದನ್ನು ಮರೆಯಬಾರದು. ಆ ನಿಟ್ಟಿನಲ್ಲಿ ಮತದಾನದ ದಿನದಂದು ತಪ್ಪದೇ ಮತಗಟ್ಟೆಗೆ ತೆರಳಿ ಮತ ಚಲಾಯಿಸಬೇಕು ಎಂದು ಅವರು ಹೇಳಿದರು. ಪ್ರತಿಯೊಬ್ಬರಲ್ಲಿಯೂ ಗ್ರಾಹಕರ ಹಕ್ಕುಗಳ ಬಗ್ಗೆಯೂ ತಿಳಿವಳಿಗೆ ಇರಬೇಕು. ಇದರಿಂದ ವಂಚನೆಗೆ ಒಳಗಾಗುವುದು ತಪ್ಪುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್‌ ನ್ಯಾಯಾಧೀಶರು ಅಭಿಪ್ರಾಯ ವ್ಯಕ್ತಪಡಿಸಿದರು. 

Advertisement

     ಜಿ.ಪಂ.ಸಿಇಒ ಮತ್ತು ಸ್ವೀಪ್‌ ಸಮಿತಿ ಅಧ್ಯಕ್ಷೆ ಕೆ.ಲಕ್ಷ್ಮೀಪ್ರಿಯಾ ಅವರು ಮಾತನಾಡಿ ಹದಿನೆಂಟು ವರ್ಷ ಪೂರ್ಣಗೊಂಡವರು ಇದುವರೆಗೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡದಿರುವವರು ಮತದಾರರ ಪಟ್ಟಿ ಯಲ್ಲಿ ಹೆಸರು ಸೇರಿಸಿ ಮತ ಹಕ್ಕು ಚಲಾಯಿಸಬೇಕು ಎಂದು ಅವರು ತಿಳಿಸಿದರು.  

     ಜಿಲ್ಲಾ ಗ್ರಾಹಕರ ವೇದಿಕೆಯ ಅಧ್ಯಕ್ಷರಾದ ಸಿ.ವಿ.ಮರಗೂರ ಅವರು ಮಾತನಾಡಿ, ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿಯಲ್ಲಿ ಗ್ರಾಹಕರಾಗಿದ್ದಾರೆ. ಆದರೆ ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿಯಲ್ಲಿ ಮೋಸಕ್ಕೆ ತುತ್ತಾಗುತ್ತಾರೆ. ಆದ್ದರಿಂದ ಎಲ್ಲರೂ ಗ್ರಾಹಕರ ಹಕ್ಕುಗಳ ಬಗ್ಗೆ ತಿಳಿದುಕೊಳ್ಳುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.  

ಅತೀ ಕಡಿಮೆ ಖರ್ಚಿನಲ್ಲಿ ಗ್ರಾಹಕರ ವೇದಿಕೆಯಲ್ಲಿ  ನ್ಯಾಯ ಒದಗಿಸ ಲಾಗುತ್ತದೆ. ಆದ್ದರಿಂದ ಈ ಅವಕಾಶ ಬಳಸಿಕೊಳ್ಳು ವಂತಾಗಬೇಕು ಎಂದು ಅವರು ಮನವಿ ಮಾಡಿದರು. ಪ್ರತಿ ಯೊಂದು ರಂಗದಲ್ಲಿಯೂ ಶೋಷಣೆ, ಮೋಸ ಇದ್ದೇ ಇರುತ್ತದೆ. ಆದ್ದರಿಂದ ಗ್ರಾಹಕರಿಗೆ ತಮ್ಮ ಹಕ್ಕುಗಳ ಬಗ್ಗೆ ತಿಳಿವಳಿಕೆ ಇರಬೇಕು ಎಂದು ಅವರು ಸಲಹೆ ಮಾಡಿದರು.  

  ಒಂದನೇ ಅಪರ ಜಿಲ್ಲಾ ಮತ್ತು ಸೆಷನ್‌ ನ್ಯಾಯಾಧೀಶರಾದ ಡಿ.ಪವನೇಶ್‌, ಹಿರಿಯ ಸಿವಿಲ್‌ ನ್ಯಾಯಾಧೀಶರಾದ ವಿಜಯಕುಮಾರ್‌, ನೂರುನ್ನೀಸಾ, ಪ್ರಧಾನ ಸಿವಿಲ್‌ ನ್ಯಾಯಾಧೀಶರು, ಜೆಎಂಎಫ್ಸಿ ಬಿ.ಕೆ.ಮನು, ಸರ್ಕಾರಿ ಅಭಿಯೋಜಕರಾದ  ಕೃಷ್ಣವೇಣಿ, 

Advertisement
Advertisement

Udayavani is now on Telegram. Click here to join our channel and stay updated with the latest news.

Next