Advertisement
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತು ಜರುಗಿದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
Related Articles
Advertisement
ರೋಟಾ ವೈರಸ್ ಬೇಧಿಯಂತಹ ಮಕ್ಕಳಲ್ಲಿ ಮರಣ ಸಂಭವಿಸುವ ಸಾಧ್ಯತೆ ಅಧಿಕ ಪ್ರಮಾಣದಲ್ಲಿದ್ದು, ಇದನ್ನು ತಡೆಗಟ್ಟಲು ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿ 6, 10 ಮತ್ತು 14ನೇ ವಾರದಲ್ಲಿ ಜನಿಸಿದ ಎಲ್ಲ ಮಕ್ಕಳಿಗೆ ರೋಟಾ ವೈರಸ್ ಲಸಿಕೆಯನ್ನು ಬಾಯಿ ಮೂಲಕ ಪ್ರತಿ ಮಗುವಿಗೆ ಒಂದು ಡೋಜ್ ನೀಡಲಾಗುವುದು. ರೋಟಾ ವೈರಸ್ ಲಸಿಕೆ ನೀಡುವ ಕುರಿತು ಆರೋಗ್ಯ ಇಲಾಖೆಯಲ್ಲಿರುವ ಎಲ್ಲ ವೈದ್ಯಾಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಹಂತ ಹಂತವಾಗಿ ತರಬೇತಿ ನೀಡಲಾಗುತ್ತಿದೆ ಎಂದು ಸಭೆಗೆ ತಿಳಿಸಿದರು.
ಕ್ಷಯರೋಗ ಪತ್ತೆ; ಚಿಕಿತ್ಸೆ ಆಂದೋಲನ: ಜಿಲ್ಲೆಯಲ್ಲಿ ಕ್ಷಯರೋಗ ಪತ್ತೆ ಹಾಗೂ ಚಿಕಿತ್ಸಾ ಆಂದೋಲನವು ಜುಲೈ 15ರಿಂದಲೇ ಪ್ರಾರಂಭಿಸಲಾಗಿದ್ದು, ಈ ಆಂದೋಲನ 27ರವರೆಗೆ ನಡೆಯಲಿದೆ. ಆರೋಗ್ಯ ಇಲಾಖೆಯ ಕ್ಷೇತ್ರ ಸಿಬ್ಬಂದಿ ಪ್ರತಿ ಮನೆ ಮನೆಗೆ ಭೇಟಿ ನೀಡಿ ಕ್ಷಯ ರೋಗದ ಸಮೀಕ್ಷೆಯಲ್ಲಿ ಕ್ಷಯ ರೋಗ ಪತ್ತೆ ಮಾಡುತ್ತಿದ್ದಾರೆ. ಇದರ ಜೊತೆಗೆ ಕ್ಷಯ ರೋಗದ ಚಿಕಿತ್ಸೆಯನ್ನು ಉಚಿತವಾಗಿ ದೊರೆಯುವ ಬಗ್ಗೆ ತಿಳಿವಳಿಕೆ ನೀಡಲಾಗುತ್ತಿದೆ. ಈ ರೋಗದ ನಿಯಂತ್ರಣಕ್ಕಾಗಿ ಬಾಗಲಕೋಟೆ ತಾಲೂಕಿನಲ್ಲಿ 344, ಹುನಗುಂದ 193, ಜಮಖಂಡಿ 245, ಮುಧೋಳ 299, ಬಾದಾಮಿ 187 ಹಾಗೂ ಬೀಳಗಿ 74 ಸೇರಿ ಒಟ್ಟು 1342 ರೋಗಿಗಳಿಒಗೆ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಅನಂತ ದೇಸಾಯಿ ಸಭೆಗೆ ತಿಳಿಸಿದರು.
ತಾಯಂದಿರ ಮರಣ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 5 ಜನ ಮಹಿಳೆಯರು ಮರಣ ಹೊಂದಿರುವುದಾಗಿ ಸಭೆಗೆ ತಿಳಿಸಿದಾಗ ಈ ಕುರಿತು ಜಿಲ್ಲಾಧಿಕಾರಿಗಳು ತಾಯಿ ಮರಣ ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರಲ್ಲದೇ ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು. ಮುಂದಿನ ದಿನಗಳಲ್ಲಿ ತಾಯಿ ಮರಣ ಸೊನ್ನೆಗೆ ತರಲು ಮುಂಜಾಗೃತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಕೀಟ ಜನ್ಯ ರೋಗಗಳ ನಿಯಂತ್ರಣ:ರಾಷ್ಟ್ರೀಯ ಕೀಟ ಜನ್ಯ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಈಗಾಗಲೇ ಜನವರಿಯಿಂದ ಜೂನ್-2019ರವರೆಗೆ ಒಟ್ಟು 2,27,074 ಜನರ ರಕ್ತ ಪರೀಕ್ಷೆ ಮಾಡಿದ್ದು, ಅದರಲ್ಲಿ 14 ಜನರಿಗೆ ಮಲೇರಿಯಾ ಖಚಿತ ಪ್ರಕರಣಗಳು ಕಂಡು ಬಂದಿವೆ. ಅವರಿಗೆ ಚಿಕಿತ್ಸೆ ನೀಡಲಾಗಿ ಸಂಪೂರ್ಣ ಗುಣಪಡಿಸಲಾಗಿದೆ. 320 ಜನರ ರಕ್ತ ಪರೀಕ್ಷೆ ಮಾಡಲಾಗಿ ಅದರಲ್ಲಿ 34 ಜನರಿಗೆ ಖಚಿತವಾಗಿದೆ. ಮತ್ತು ಚಿಕುನ್ ಗುನ್ಯಾಗೆ ಸಂಬಂಧಿಸಿದಂತೆ 238 ಜನರನ್ನು ಪರೀಕ್ಷಿಸಲಾಗಿ ಅದರಲ್ಲಿ 49 ಜನರಿಗೆ ಖಚಿತವಾಗಿ ಪ್ರಕರಣಗಳಾಗಿವೆ. ಫೈಲೇರಿಯಾಗೆ ಒಟ್ಟು 54109 ಜನರ ರಕ್ತ ಪರೀಕ್ಷೆಯಲ್ಲಿ 4 ಜನರಿಗೆ ಆನೇಕಾಲು ರೋಗ ಖಚಿತಪಟ್ಟ ಬಗ್ಗೆ ಜಿಲ್ಲಾ ಮಲೇರಿಯಾ ಅಧಿಕಾರಿ ಡಾ| ಜಯಶ್ರೀ ಎಮ್ಮಿ ಸಭೆಗೆ ತಿಳಿಸಿದರು.
ಸಭೆಯಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ಗರಿಮಾ ಪಂವಾರ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ| ಪ್ರಕಾಶ ಬಿರಾದಾರ, ಜಿಲ್ಲಾ ಟಿಬಿ ನಿಯಂತ್ರಣಾಧಿಕಾರಿ ಡಾ|ಪಿ.ಎ.ಹಿಟ್ನಳ್ಳಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ| ಡಿ.ಬಿ.ಪಟ್ಟಣಶೆಟ್ಟಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ| ಕುಸುಮಾ ಮಾಗಿ, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಪವಾಡೆಪ್ಪ ಉಪಸ್ಥಿತರಿದ್ದರು.