Advertisement
ತಾಲೂಕಿನ ಹುಣಸಿಹಾಳ ಗ್ರಾಮದಲ್ಲಿ ಆರೋಗ್ಯ ಇಲಾಖೆ ಹಾಗೂ ಜನಜಾಗೃತಿ ಕಲಾರಂಗ ಸಂಸ್ಥೆ ಕುಷ್ಟಗಿ ಆಶ್ರಯದಲ್ಲಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಜನಜಾಗೃತಿ ನಿಮಿತ್ಯ ಏರ್ಪಡಿಸಲಾಗಿದ್ದ ಬೀದಿನಾಟಕ ಹಾಗೂ ಜಾನಪದ ಗೀತೆಗಳ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಗ್ರಾಮೀಣ ಭಾಗದ ಜನತೆ ಕೆಲಸದ ಒತ್ತಡದಲ್ಲಿ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸದ ಪರಿಣಾಮ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಅನಾರೋಗ್ಯ ಪೀಡಿತರಾಗಿ ಸಮಸ್ಯೆ ಎದುರಿಸುವ ಮುನ್ನ ಮುನ್ನೆಚ್ಚರಿಕೆ ವಹಿಸಿದರೆ ಹಣದ ಜತೆಗೆ ಸಮಯವನ್ನು ಉಳಿಸಬಹುದು. ಬಹುತೇಕ ರೋಗಗಳು ನಾವು ಸೇವಿಸುವ ಆಹಾರ ಹಾಗೂ ನೀರಿನಿಂದ ಹರಡುತ್ತವೆ ಎಂದರು. ಎಪಿಎಂಸಿ ಮಾಜಿ ಸದಸ್ಯ ಶಿವಸಂಗಪ್ಪ ಹುಚನೂರು ಮಾತನಾಡಿ, ಗ್ರಾಮೀಣ ಭಾಗದ ಜನತೆ ಕಾಲಕಾಲಕ್ಕೆ ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕಿರುವುದು ಅತ್ಯಗತ್ಯವಾಗಿದೆ. ರೋಗಗಳ ಬಗ್ಗೆ ಅರಿವಿಲ್ಲದೆ ಕೊನೆಯ ಹಂತದಲ್ಲಿ ಪ್ರಾಣವನ್ನೇ ಕಳೆದುಕೊಂಡಿರುವ ಉದಾಹರಣೆಗಳು ಸಾಕಷ್ಟಿವೆ. ಅದಕ್ಕೆ ಅವಕಾಶ ನೀಡಬಾರದು, ಆರೋಗ್ಯ ಇಲಾಖೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಗಾಗ ಹಮ್ಮಿಕೊಳ್ಳಬೇಕು ಎಂದರು.
Advertisement
ಕೆಲಸದ ಒತ್ತಡದಲ್ಲಿ ಆರೋಗ್ಯ ನಿರ್ಲಕ್ಷ್ಯ ಸಲ್ಲ: ಬೆನ್ನೂರ
03:28 PM Dec 13, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.