Advertisement

ಅಂಗಾಂಗ ದಾನದ ಬಗ್ಗೆ ಜಾಗೃತಿ ಅಗತ್ಯ: ಡಾ|ಕೆ.ಸುಧಾಕರ್‌

09:41 PM Feb 12, 2022 | Team Udayavani |

ಬೆಂಗಳೂರು: ಸಾರ್ವಜನಿಕರಲ್ಲಿ ಜಾಗೃತಿ ಕೊರತೆಯಿಂದಾಗಿ ಅಂಗಾಂಗ ದಾನ ಕಡಿಮೆಯಾಗಿದೆ. ಅಂಗಾಂಗ ದಾನ ಹೆಚ್ಚಿಸಲು ಇಡೀ ಸಮಾಜ, ಜಾಗೃತ ನಾಗರಿಕರು, ವೈದ್ಯರು ಶ್ರಮಿಸಬೇಕಿದೆ. ಈ ಮೂಲಕ ಅಂಗಾಂಗ ದಾನದ ಪ್ರಮಾಣವನ್ನು ಹೆಚ್ಚಿಸಬೇಕಿದೆ ಎಂದು ಆರೋಗ್ಯ ಸಚಿವ ಡಾ| ಕೆ. ಸುಧಾಕರ್‌ ಹೇಳಿದ್ದಾರೆ.

Advertisement

ಅಂಗಾಂಗಗಳ ದಾನದಲ್ಲಿ ಅಮೆರಿಕ ಹಾಗೂ ಚೀನ ದೇಶಗಳ ಬಳಿಕ, ಭಾರತ ಮೂರನೇ ಸ್ಥಾನದಲ್ಲಿದೆ. 2012-13ನೇ ಸಾಲಿಗೆ ಹೋಲಿಸಿದರೆ, ಅಂಗಾಂಗ ದಾನದ ಪ್ರಮಾಣವು ನಾಲ್ಕು ಪಟ್ಟು ಹೆಚ್ಚಾಗಿದೆ. ದೇಶದಲ್ಲಿ ವಾರ್ಷಿಕ ಅಂಗಾಂಗ ದಾನಗಳ ಸಂಖ್ಯೆ 2013ರಲ್ಲಿ 4,990 ಆಗಿದ್ದು, 2019ರಲ್ಲಿ 12,746ಕ್ಕೆ ಏರಿದೆ. ಅಂಗಾಂಗ ದಾನದ ಪ್ರಮಾಣದಲ್ಲಿ ನಾಲ್ಕು ಪಟ್ಟು ಏರಿಕೆ ಕಂಡಿದ್ದರೂ, ಅಂಗಾಂಗಗಳ ಬೇಡಿಕೆಯನ್ನು ಪೂರೈಸಲು ಇನ್ನಷ್ಟು ಹಾದಿಯನ್ನು ಸವೆಸಬೇಕಾಗಿದೆ. ದೇಶದಲ್ಲಿ ಕೇವಲ ಶೇ. 3 ಜನರು ಮಾತ್ರ ಅಂಗಾಂಗ ದಾನಕ್ಕೆ ನೋಂದಣಿ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.

ಕೋಲಾರದ 26 ವರ್ಷದ ಚೈತ್ರಾ ಅವರ ಅಂಗಾಂಗಗಳನ್ನು ದಾನ ಮಾಡಿರುವುದು ಇಡೀ ಸಮಾಜಕ್ಕೆ ಸ್ಫೂರ್ತಿದಾಯಕ ಸಂಗತಿ. ಮರಣದ ನಂತರ ಮತ್ತೂಬ್ಬರ ಜೀವ ಉಳಿಸಲು ಸಾಧ್ಯವಾಗುವ ಅಂಗಾಂಗ ದಾನವನ್ನು ಮಾಡಲು ಎಲ್ಲರೂ ಪ್ರತಿಜ್ಞೆ ಮಾಡಬೇಕು ಎಂದು ಪ್ರತಿಯೊಬ್ಬರಲ್ಲೂ ಕೋರುತ್ತೇನೆ. – ಡಾ| ಸುಧಾಕರ್‌, ಆರೋಗ್ಯ ಸಚಿವ

Advertisement

Udayavani is now on Telegram. Click here to join our channel and stay updated with the latest news.

Next