Advertisement

ಬಯಲು ಬಹಿರ್ದೆಸೆ ಮುಕ್ತಿಗೆ ಜಾಗೃತಿ ಮೂಡಿಸಿ

02:07 PM May 19, 2022 | Team Udayavani |

ಕೊಪ್ಪಳ: ಬಯಲು ಬಹಿರ್ದೆಸೆ ಮುಕ್ತ ಗ್ರಾಮವನ್ನಾಗಿಸಲು ಪಿಡಿಒಗಳು ತಮ್ಮ ಅಧಿಕಾರ ಬಳಸಿ, ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಹಿರಿಯ ಸಿವಿಲ್‌ ನ್ಯಾಯಾಧಿಧೀಶರಾದ ದೇವೇಂದ್ರ ಪಂಡಿತ್‌ ಹೇಳಿದರು.

Advertisement

ಜಿಪಂ, ಸ್ವತ್ಛ ಭಾರತ ಮಿಷನ್‌ (ಗ್ರಾಮೀಣ) ಯೋಜನೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಅಡಿಟೋರಿಯಂ ಸಭಾಂಗಣದಲ್ಲಿ ಜಿಲ್ಲೆಯ ಇಒ, ಪಿಡಿಒ, ಕಾರ್ಯದರ್ಶಿಗಳಿಗೆ ಬಯಲು ಬಹಿರ್ದೆಸೆ ಮುಕ್ತ ಎಂದು ಘೋಷಣೆ ಕುರಿತು ಕಾನೂನು ಸಲಹೆಯ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಪಂಚಾಯತ್‌ ರಾಜ್‌ ಕಾಯ್ದೆ 1993ರಲ್ಲಿ ಪಿಡಿಒಗಳಿಗೆ ಗ್ರಾಮಗಳ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲ ಅಧಿಕಾರಗಳನ್ನು ನೀಡಲಾಗಿದೆ. ಕಾಯ್ದೆಯನ್ನು ಸರಿಯಾಗಿ ಓದಿ, ಅರ್ಥೈಸಿಕೊಂಡು ಅದರಲ್ಲಿನ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತಂದರೆ ಗ್ರಾಮಗಳ ಅಭಿವೃದ್ಧಿ ಕಷ್ಟವೇನಲ್ಲ. ಅದರಂತೆ ಗ್ರಾಮಗಳ ಸ್ವಚ್ಛತೆ, ಸಮುದಾಯಿಕ ಹಾಗೂ ವೈಯಕ್ತಿಕ ಶೌಚಾಲಯಗಳ ನಿರ್ಮಾಣ ಮುಂತಾದ ಶುಚಿತ್ವಕ್ಕೆ ಸಂಬಂಧಿಸಿದ ಕಾನೂನುಗಳನ್ನು ಸಾಂದರ್ಭಿಕವಾಗಿ ಕಾರ್ಯರೂಪಕ್ಕೆ ತರುವುದು ಪಿಡಿಒಗಳ ಜವಾಬ್ದಾರಿಯಾಗಿದೆ ಎಂದರು.

ಗ್ರಾಮ ಸಭೆ, ಸ್ಥಾಯಿ ಸಮಿತಿಗಳ ರಚನೆ ಇನ್ನೂ ಹಲವಾರು ವಿಷಯಗಳನ್ನು ಕಾಯ್ದೆಯಲ್ಲಿ ತಿಳಿಯಬಹುದು. ಯಾವುದೇ ವ್ಯಕ್ತಿ ಸಾರ್ವಜನಿಕ ಪ್ರದೇಶದಲ್ಲಿ ಮಲ ವಿಸರ್ಜನೆ ಮಾಡಿದರೆ ದಂಡ ಹಾಕಬಹುದು. ಗ್ರಾಮದಲ್ಲಿ ಮುಖ್ಯವಾಗಿ ಸ್ವಚ್ಛತೆ, ವೈಯಕ್ತಿಕ ಶೌಚಾಲಯ ಮತ್ತು ಸಮುದಾಯ ಶೌಚಾಲಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಸ್ವಚ್ಛ ಭಾರತ್‌ ಮಿಷನ್‌ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡಬೇಕು. ಜನರ ವರ್ತನೆಯಲ್ಲಿ ಬದಲಾವಣೆ ತರಬೇಕು. ಸಮುದಾಯ ಶೌಚಾಲಯಗಳಲ್ಲಿ ಸ್ತ್ರೀ-ಪುರುಷರಿಗೆ ಬೇರೆ ಬೇರೆ ಕಡೆ ಶೌಚಾಲಯ ನಿರ್ಮಾಣ ಮಾಡಬೇಕೆಂದರು.

ಜಿಪಂ ಸಿಇಒ ಬಿ. ಫೌಜಿಯಾ ತರನ್ನುಮ್‌ ಮಾತನಾಡಿ, ಹಿಂದಿನ ವರ್ಷ ಚಿಲುಮೆ ಕಾರ್ಯಕ್ರಮದ ಮೂಲಕ ಶೌಚಾಲಯಗಳ ಬಳಕೆ ಕುರಿತು ಅನೇಕ ಜಾಗೃತಿ ಕಾರ್ಯಕ್ರಮ ಮಾಡಿದ್ದೇವೆ. ಹಾಗೇ ಮಹಿಳೆಯರ ವೈಯಕ್ತಿಕ ಸ್ವತ್ಛತೆ ಬಗ್ಗೆ ಜಾಗೃತಿ ಮೂಡಿಸಲು ಹೆಚ್ಚಿನ ಗಮನ ಹರಿಸಿದ್ದೇವೆ. ಘನ ಮತ್ತು ಒಣ ತ್ಯಾಜ್ಯ, ಹಸಿ ತ್ಯಾಜ್ಯ ವಿಲೇವಾರಿ ಘಟಕಗಳನ್ನು ನಿರ್ಮಾಣ ಮಾಡಿದ್ದೇವೆ. ಪ್ರತಿ ಗ್ರಾಪಂನಲ್ಲಿ ಪ್ರತಿದಿನ ರಸ್ತೆ, ಸಾರ್ವಜನಿಕ ಸ್ಥಳ, ಶಾಲೆ, ಅಂಗನವಾಡಿ ಕೇಂದ್ರಗಳಲ್ಲಿ ಸ್ವತ್ಛತೆ ಕಾಪಾಡಿಕೊಳ್ಳಬೇಕು. ಗ್ರಾಮದ ಚರಂಡಿಗಳಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಬೇಕು. ಇದರಿಂದ ಡೆಂಘೀ, ಚಿಕನ್‌ಗುನ್ಯಾ ದಂತಹ ಕಾಯಿಲೆಗಳಿಂದ ರಕ್ಷಿಸಿಕೊಳ್ಳಬಹುದು. ಒಡಿಎಫ್‌ ಬಗ್ಗೆ ಜನರಿಗೆ ಅರಿವು ಮೂಡಿಸಬೇಕೆಂದರು.

Advertisement

ವಕೀಲ ಹನುಮಂತರಾಯ ಮಾತನಾಡಿದರು. ಜಿಪಂ ಉಪಕಾರ್ಯದರ್ಶಿ ಶರಣ ಬಸವರಾಜ, ಜಿಲ್ಲೆಯ ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು ಮತ್ತು ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next