ಪೋರ್ಟ್ ಆಫ್ ಸ್ಪೇನ್: ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯ ಎರಡನೇ ಪಂದ್ಯವನ್ನೂ ಭಾರತ ತಂಡ ಗೆದ್ದುಕೊಂಡಿದೆ. ಟೀಂ ಇಂಡಿಯಾ ಕೈ ಜಾರುತ್ತಿದ್ದ ಪಂದ್ಯವನ್ನು ಆಲ್ ರೌಂಡರ್ ಅಕ್ಷರ್ ಪಟೇಲ್ ಅವರ ಬಿರುಸಿನ ಆಟ ರಕ್ಷಿಸಿತು. ಏಕದಿನ ಕ್ರಿಕೆಟ್ ನ ಮೊದಲ ಅರ್ಧಶತಕ ಬಾರಿಸಿದ ಅಕ್ಷರ್ ಪಟೇಲ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ಇದೇ ವೇಳೆ ಅಕ್ಷರ್ ಪಟೇಲ್ ಅವರು ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯ ಹಳೇಯ ದಾಖಲೆಯೊಂದನ್ನು ಅಳಿಸಿ ಹಾಕಿದರು. ಏಕದಿನ ಕ್ರಿಕೆಟ್ ನಲ್ಲಿ ಚೇಸಿಂಗ್ ವೇಳೆ ಏಳು ಅಥವಾ ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ ಅತೀ ಹೆಚ್ಚು ಸಿಕ್ಸರ್ ಬಾರಿಸಿದ ಭಾರತೀಯ ದಾಖಲೆಗೆ ಅಕ್ಷರ್ ಪಾತ್ರರಾದರು. ವಿಂಡೀಸ್ ವಿರುದ್ಧದ ಪಂದ್ಯದಲ್ಲಿ 35 ಎಸೆತಗಳಲ್ಲಿ 64 ರನ್ ಗಳಿಸಿದ ಅಕ್ಷರ್ ಪಟೇಲ್ ಐದು ಭರ್ಜರಿ ಸಿಕ್ಸರ್ ಬಾರಿಸಿದ್ದರು.
ಇದನ್ನೂ ಓದಿ:ಬಾಲಿವುಡ್ ಜೋಡಿ ಕತ್ರಿನಾ ಕೈಫ್, ವಿಕ್ಕಿ ಕೌಶಲ್‌ಗೆ ಜೀವ ಬೆದರಿಕೆ: ಪ್ರಕರಣ ದಾಖಲು
2005ರಲ್ಲಿ ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ಮೂರು ಸಿಕ್ಸರ್ ಬಾರಿಸಿದ್ದರು. ಬಳಿಕ 2011ರಲ್ಲಿ ಯೂಸುಫ್ ಪಠಾಣ್ ಎರಡು ಬಾರಿ ಈ ದಾಖಲೆಯನ್ನು ಸರಿಗಟ್ಟಿದ್ದರು. ಯೂಸುಫ್ ಪಠಾಣ್ ಅವರು ದಕ್ಷಿಣ ಆಫ್ರಿಕಾ ಮತ್ತು ಐರ್ಲೆಂಡ್ ವಿರುದ್ಧ ಈ ಸಾಧನೆ ಮಾಡಿದ್ದರು.
Related Articles
ಪೋರ್ಟ್ ಆಫ್ ಸ್ಪೇನ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ಶಾಯ್ ಹೋಪ್ ಶತಕ ಮತ್ತು ನಿಕೋಲಸ್ ಪೂರನ್ ಅರ್ಧಶತಕದ ನೆರವಿನಿಂದ ಆರು ವಿಕೆಟ್ ನಷ್ಟಕ್ಕೆ 311 ರನ್ ಗಳಿಸಿತ್ತು. ಗುರಿ ಬೆನ್ನತ್ತಿದ್ದ ಭಾರತ ತಂಡವು ಅಕ್ಷರ್ ಪಟೇಲ್, ಅಯ್ಯರ್ ಮತ್ತು ಸಂಜು ಸ್ಯಾಮ್ಸನ್ ಅರ್ಧಶತಕದ ನೆರವಿನಿಂದ ಎಂಟು ವಿಕೆಟ್ ಕಳೆದುಕೊಂಡು ಇನ್ನೂ ಎರಡು ಎಸೆತ ಬಾಕಿ ಇರುವಂತೆ ಗೆಲುವು ಸಾಧಿಸಿತು.