ಬೆಂಗಳೂರು: ಮುಂಬರುವ ಐಸಿಸಿ ವಿಶ್ವಕಪ್ 2023 ರ ಸಮಯದಲ್ಲಿ ಚೇತರಿಸಿಕೊಳ್ಳುವ ಅಕ್ಷರ್ ಪಟೇಲ್ ಅವರ ಹಂಬಲಕ್ಕೆ ಮತ್ತೊಂದು ಹೊಡೆತ ಬಿದ್ದಿದೆ. ಆಸ್ಟ್ರೇಲಿಯಾ ವಿರುದ್ಧ ಮುಂಬರುವ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಿಂದಲೂ ಅಶ್ವಿನ್ ಹೊರಗುಳಿದಿದ್ದಾರೆ.
ಈ ತಿಂಗಳ ಆರಂಭದಲ್ಲಿ ಏಷ್ಯಾ ಕಪ್ ಕೂಟದಲ್ಲಿ ಬಾಂಗ್ಲಾದೇಶ ವಿರುದ್ಧದ ಸೂಪರ್ 4 ಪಂದ್ಯದಲ್ಲಿ ತೊಡೆಗೆ ಗಾಯವಾದಾಗಿನಿಂದ ಸ್ಪಿನ್-ಬೌಲಿಂಗ್ ಆಲ್ ರೌಂಡರ್ ಅಕ್ಷರ್ ಆಟದಿಂದ ಹೊರಗುಳಿದಿದ್ದಾರೆ.
ಏಷ್ಯಾ ಕಪ್ ಫೈನಲ್ ಪಂದ್ಯಕ್ಕೆ ಅಕ್ಷರ್ ಬದಲು ವಾಷಿಂಗ್ಟನ್ ಸುಂದರ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿತ್ತು. ಆಸೀಸ್ ಸರಣಿಯ ಮೊದಲೆರಡು ಪಂದ್ಯಗಳಿಗೆ ಅಕ್ಷರ್ ರನ್ನು ಹೊರಗಿಡಲಾಗಿತ್ತು. ಆದರೆ ಮೂರನೇ ಪಂದ್ಯಕ್ಕೆ ಅವರನ್ನು ಆಯ್ಕೆ ಮಾಡಲಾಗಿತ್ತು. ಇದೀಗ ಅವರು ಚೇತರಿಸಿಕೊಳ್ಳದ ಕಾರಣದಿಂದ ಹೊರಬಿದ್ದಿದ್ದಾರೆ.
ಅಕ್ಷರ್ ಪಟೇಲ್ ಅವರು ಅಂತಿಮ ಏಕದಿನ ಪಂದ್ಯಕ್ಕೆ ತಂಡದಲ್ಲಿ ಸೇರಿಸಿಕೊಳ್ಳಲು ಸಾಕಷ್ಟು ಚೇತರಿಸಿಕೊಂಡಿಲ್ಲ ಎಂದು ವರದಿ ಹೇಳಿದೆ. ಅವರು ಪ್ರಸ್ತುತ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (NCA) ವಿಶ್ರಾಂತಿ ಪಡೆಯುತ್ತಿದ್ದಾರೆ. ಅಕ್ಷರ್ ಪಟೇಲ್ ತಂಡದಿಂದ ಹೊರಗುಳಿದ ಹಿನ್ನೆಲೆಯಲ್ಲಿ ಭಾರತ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರನ್ನು ಸರಣಿಗೆ ವಾಪಸ್ ಕರೆಸಿಕೊಂಡಿತ್ತು.
ಒಂದು ವೇಳೆ ಅಕ್ಷರ್ ಫಿಟ್ ಆದರೆ ಭಾರತದ 15 ಸದಸ್ಯರ ವಿಶ್ವಕಪ್ ತಂಡದಲ್ಲಿ ಅವರನ್ನೇ ಮುಂದುವರಿಸುವು ಸಾಧ್ಯತೆಯಿದೆ. ಇಲ್ಲದಿದ್ದರೆ ಆರ್.ಅಶ್ವಿನ್ ತಂಡಕ್ಕೆ ಸೇರಬಹುದು. ತಂಡವನ್ನು ಅಂತಿಮಗೊಳಿಸಲು ಸೆಪ್ಟೆಂಬರ್ 28 ಗಡುವು ಆಗಿರುವುದರಿಂದ, ಭಾರತವು ಅಕ್ಷರ್ ಪಟೇಲ್ ಭಾಗವಹಿಸುವಿಕೆಯ ಅಂತಿಮ ಕರೆಯನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ.