Advertisement

ದೂರದರ್ಶನ ಕಲಾವಿದೆಯಾಗಿ ಆಯ್ಕೆಯಾದ ಮೂಡುಬಿದಿರೆಯ ಅಯನಾ. ವಿ. ರಮಣ್

12:30 PM Jul 26, 2024 | Team Udayavani |

ಮೂಡಬಿದಿರೆ: ಬಹುಮುಖ ಪ್ರತಿಭೆಯ ಕಲಾವಿದೆ, ಮೂಡುಬಿದಿರೆಯ ಅಯನಾ. ವಿ. ರಮಣ್ ದೂರದರ್ಶನ ಕಲಾವಿದೆಯಾಗಿ ಆಯ್ಕೆಯಾಗಿದ್ದಾರೆ.

Advertisement

ಮಂಗಳೂರಿನ ಸನಾತನ ನಾಟ್ಯಾಲಯದ ಕರ್ನಾಟಕ ಕಲಾಶ್ರೀ ವಿದುಷಿ ಶಾರದಾ ಮಣಿ ಶೇಖರ್ ಮಾರ್ಗದರ್ಶನದಲ್ಲಿ ಬೆಂಗಳೂರು ದೂರದರ್ಶನ ಕೇಂದ್ರದ ಆಯ್ಕೆ ಪ್ರಕ್ರಿಯೆ ಎದುರಿಸಿ ʼಬಿʼ ಗ್ರೇಡ್  ಮಾನ್ಯತೆ ಪಡೆದಿದ್ದಾರೆ.

ಬೆಂಗಳೂರಿನ ಕರ್ನಾಟಕ ಕಲಾಶ್ರೀ ವಿದ್ವಾನ್ ಸತ್ಯನಾರಾಯಣ ರಾಜು ಅವರಿಂದ ವಿಶೇಷ ತರಬೇತಿ ಪಡೆಯುತ್ತಿರುವ ಅಯನಾ ಸಾಧನೆಗೆ ಉಡುಪಿ ಶ್ರೀ ಕೃಷ್ಣ ಮಠ – ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಆಶೀರ್ವಾದ ಪೂರ್ವಕವಾಗಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮೂಡಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ಅಯನಾ .ವಿ. ರಮಣ್ ನಡೆಸುವ ನೃತ್ಯ ಸಂಸ್ಥೆ ʼನಾಟ್ಯಾಯನ ಮೂಡುಬಿದಿರೆʼ ಮತ್ತು ನೃತ್ಯ ಗುರುವಾಗಿರುವ ʼರಂಗಭಾರತಿ ಕಲಾಮಂದಿರಮ್ʼ, ಕುಶಾಲನಗರ, ಸಂಸ್ಥೆಗಳ ಪದಾಧಿಕಾರಿಗಳು, ವಿದ್ಯಾರ್ಥಿಗಳು, ಹೆತ್ತವರು ಅಭಿನಂದಿಸಿದ್ದಾರೆ.

ಮನೆ- ಮನೆಗೆ ಭರತನಾಟ್ಯ ಮತ್ತು ವಿಶಿಷ್ಟವಾದ ನಾಟ್ಯಾಯನ ಕಾರ್ಯಕ್ರಮಗಳನ್ನು ದೇಶ – ವಿದೇಶಗಳಲ್ಲಿ ಪ್ರದರ್ಶನ ಮಾಡುತ್ತಿರುವ ಅಯನಾ  ಮೈಸೂರು ವಿವಿಯಲ್ಲಿ ಆಂಗ್ಲ ಭಾಷೆಯ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದಾರೆ.

Advertisement

ಅಯನಾ. ವಿ. ರಮಣ್ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ಉಪನ್ಯಾಸಕಿ ಡಾ . ಮುಕಾಂಬಿಕಾ .ಜಿ. ಎಸ್ ಮತ್ತು ಶ್ರೀ ಪುತ್ತಿಗೆ ಮಠದ ಕೋಟಿ ಗೀತಾ ಲೇಖನ ಯಜ್ಞ ಪ್ರಚಾರಕ ಕೆ. ವಿ.  ರಮಣ್ ಆಚಾರ್ಯ ದಂಪತಿಯ ಪುತ್ರಿ.

Advertisement

Udayavani is now on Telegram. Click here to join our channel and stay updated with the latest news.

Next