Advertisement

ಅಯೋಧ್ಯೆ ಪ್ರಕರಣದ ತೀರ್ಪು ದೂರಗಾಮಿ ಪರಿಣಾಮ

07:24 AM Oct 23, 2019 | Hari Prasad |

ಹೊಸದಿಲ್ಲಿ: ಅಯೋಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಅರ್ಜಿದಾರರಿಗೆ ಲಿಖೀತ ದಾಖಲೆ ಸಲ್ಲಿಕೆಗೆ ಸುಪ್ರೀಂಕೋರ್ಟ್‌ ಅವಕಾಶ ನೀಡಿದೆ. ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೋಯ್‌ ನೇತೃತ್ವದ ನ್ಯಾಯಪೀಠದ ಮುಂದೆ ಉತ್ತರ ಪ್ರದೇಶ ಸುನ್ನಿ ವಕ್ಫ್ ಮಂಡಳಿ ಸೇರಿದಂತೆ ಹಲವು ಸಂಘಟನೆಗಳು ದಾಖಲೆಗಳನ್ನು ಸಲ್ಲಿಕೆ ಮಾಡಿವೆ.

Advertisement

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಂಘಟನೆಗಳ ಪರ ನ್ಯಾಯವಾದಿ ರಾಜೀವ್‌ ಧವನ್‌ “ಲಿಖಿತವಾಗಿ ವಿವಾದದ ಬಗ್ಗೆ ನ್ಯಾಯಪೀಠಕ್ಕೆ ಸಲ್ಲಿಕೆ ಮಾಡಬೇಕಾದ ದಾಖಲೆಗಳನ್ನು ಸಲ್ಲಿಸಿದ್ದೇವೆ. ಗೌರವಾನ್ವಿತ ನ್ಯಾಯಾಲಯ ಯಾವುದೇ ರೀತಿ ತೀರ್ಪು ನೀಡಿದರೂ, ಅದು ಮುಂದಿನ ಜನಾಂಗದ ಮತ್ತು ರಾಜಕೀಯ ವ್ಯವಸ್ಥೆಯ ಮೇಲೆ ಪರಿಣಾಮ ಬೀರಲಿದೆ ಎಂದು ಅರಿಕೆ ಮಾಡಿಕೊಂಡಿದ್ದೇವೆ’ ಎಂದು ಹೇಳಿದ್ದಾರೆ. ಇದರ ಜತೆಗೆ “ತೀರ್ಪು, ಸಂವಿಧಾನದ ಮೇಲೆ ನಂಬಿಕೆ ಇರಿಸಿಕೊಂಡವರ ಮನಸ್ಸಿನ ಮೇಲೂ ಪ್ರಭಾವ ಬೀರಲಿದೆ’ ಎಂದು ಪ್ರತಿಪಾದಿಸಲಾಗಿದೆ.

ಶನಿವಾರ ಹಿಂದೂ ಮತ್ತು ಮುಸ್ಲಿಂ ಸಂಘಟನೆಗಳು ತಮ್ಮ ತಮ್ಮ ವಕೀಲರ ಮೂಲಕ ಹೇಳಿಕೆ ಸಲ್ಲಿಸಿದ್ದವು. ನಲವತ್ತು ದಿನಗಳ ಕಾಲ ವಾದ- ಪ್ರತಿವಾದದ ಬಳಿಕ ಅ.16ರಂದು ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೋಯ್‌ ನೇತೃತ್ವದ ಸಾಂವಿಧಾನಿಕ ಪೀಠ ತೀರ್ಪು ಕಾಯ್ದಿರಿಸಿದೆ. ನ.17 ರಂದು ಮುಖ್ಯ ನ್ಯಾಯಮೂರ್ತಿ ಗೊಗೋಯ್‌ ನಿವೃತ್ತರಾಗುವ ಮುನ್ನ ತೀರ್ಪು ಪ್ರಕಟವಾಗುವ ಸಾಧ್ಯತೆ ಇದೆ.

Advertisement

Udayavani is now on Telegram. Click here to join our channel and stay updated with the latest news.

Next