Advertisement

Ayodhya; ರಾಮದರ್ಶನ ಪಡೆದು ಹೃದಯಾಘಾತದಿಂದ ಕೊನೆಯುಸಿರೆಳೆದ ಉಡುಪಿಯ ಭಕ್ತ

10:15 PM Mar 10, 2024 | Team Udayavani |

ಅಯೋಧ್ಯೆ/ಉಡುಪಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಪಾಂಗಾಳ ಪಾಂಡುರಂಗ ಶಾನುಭಾಗ್‌ (62) ಅವರು ಮಾ.10ರಂದು ಅಯೋಧ್ಯೆಯ ರಾಮಮಂದಿರದ ಬಳಿ ನಿಧನ ಹೊಂದಿದರು. ಮೃತರು ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

Advertisement

ಪ್ರತಿಷ್ಠೆಯ ಮಂಡಲಪೂಜೆ ಸಮಾಪನ ಸಂದರ್ಭ ರವಿವಾರ ಬೆಳಗ್ಗೆ ರಾಮನ ದರ್ಶನ ಪಡೆದು, ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಂದ ಕಲಶಾಭಿಷೇಕದ ತೀರ್ಥ ಪ್ರಸಾದ ಸ್ವೀಕರಿಸಿ ಸಂಸ್ಕೃತದಲ್ಲಿಯೇ ಮಾತನಾಡಿದ್ದರು. ಅಪರಾಹ್ನ ಪಲ್ಲಕ್ಕಿ ಉತ್ಸವಕ್ಕೆ ಆಗಮಿಸುವಾಗ ಮಂದಿರದ ಹೊರಭಾಗದ ದ್ವಾರದ ಬಳಿ ಹೃದಯಾಘಾತವಾಯಿತು. ಅವರನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ನಿಧನ ಹೊಂದಿದ್ದರು. ಮುಂದಿನ ವ್ಯವಸ್ಥೆಯನ್ನು ವಿಶ್ವ ಹಿಂದೂ ಪರಿಷತ್‌ ಪ್ರಮುಖರಾದ ಗೋಪಾಲ್‌, ಮಾಜಿ ಶಾಸಕ ಕೆ.ರಘುಪತಿ ಭಟ್‌ ಮಾಡಿದರು.

ಶಾನುಭಾಗ್‌ ಅವರು ಅಂಧರಾಗಿದ್ದರೂ ಬಾಲ್ಯದಿಂದಲೂ ಆರೆಸ್ಸೆಸ್‌ ಸಂಪರ್ಕ ಹೊಂದಿ ಜಿಲ್ಲಾ ಬೌದ್ಧಿಕ್‌ ಪ್ರಮುಖ್‌ ಸಹಿತ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಶ್ರೀರಾಮ ಮಂದಿನ ನಿರ್ಮಾಣ ಹೋರಾಟಗಳಲ್ಲಿಯೂ ಸಕ್ರಿಯರಾಗಿದ್ದರು. ಸಿಂಡಿಕೇಟ್‌ ಬ್ಯಾಂಕಿನ ಮಣಿಪಾಲ ಪ್ರಧಾನ ಕಚೇರಿ, ಉಡುಪಿಯ ಕೆಥೋಲಿಕ್‌ ಸೆಂಟರ್‌ ಕಚೇರಿಗಳಲ್ಲಿ ಟೆಲಿಫೋನ್‌ ಆಪರೇಟರ್‌ ಮತ್ತು ಸಿಬಂದಿ ತರಬೇತುದಾರರಾಗಿ ಸೇವೆ ಸಲ್ಲಿಸಿದ್ದರು. ಸಂಸ್ಕೃತ, ರಾಮಾಯಣ, ಮಹಾಭಾರತದಲ್ಲಿ ಅಪಾರವಾದ ಪಾಂಡಿತ್ಯ ಹೊಂದಿದ್ದರು. ಚಿಂತಕರೂ ಆಗಿದ್ದ ಇವರ ನಿಧನಕ್ಕೆ ಪೇಜಾವರ ಶ್ರೀ, ಶಾಸಕರಾದ ಯಶ್‌ಪಾಲ್‌ ಸುವರ್ಣ, ಗುರ್ಮೆ ಸುರೇಶ್‌ ಶೆಟ್ಟಿ, ಮಾಜಿ ಶಾಸಕ ರಘುಪತಿ ಭಟ್‌, ಲಾಲಾಜಿ ಆರ್‌. ಮೆಂಡನ್‌ ಮುಂತಾದವರು ಸಂತಾಪ ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next