ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ 1,800 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ಕಟ್ಟಡ ನಿರ್ಮಾಣ ಜವಾಬ್ದಾರಿ ಹೊತ್ತಿರುವ ಟ್ರಸ್ಟ್ ನ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಟ್ರಾಫಿಕ್ ನಲ್ಲಿ ಸಿಲುಕಿದ ಕಾರು : ರೋಗಿಯ ಜೀವ ಉಳಿಸಲು 3 ಕಿ.ಮೀ ಓಡೋಡಿ ಬಂದ ಡಾಕ್ಟರ್
ಉತ್ತರಪ್ರದೇಶದ ಅಯೋಧ್ಯೆಯಲ್ಲಿ ದೇವಸ್ಥಾನ ನಿರ್ಮಾಣ ಮಾಡಲು ಸುಪ್ರೀಂಕೋರ್ಟ್ ಆದೇಶದಂತೆ ಶ್ರೀರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ರಚನೆಯಾಗಿತ್ತು. ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣಕ್ಕಾಗಿ ಟ್ರಸ್ಟ್ ಸುದೀರ್ಘ ಸಭೆಯ ನಂತರ ಮಾರ್ಗಸೂಚಿಯನ್ನು ನಿಗದಿಪಡಿಸಿತ್ತು.
ಫೈಜಾಬಾದ್ ಸರ್ಕ್ಯೂಟ್ ಹೌಸ್ ನಲ್ಲಿ ನಡೆದ ಸಭೆಯಲ್ಲಿ ಪ್ರಮುಖ ಹಿಂದೂ ಸ್ವಾಮೀಜಿಗಳ ವಿಗ್ರಹಗಳನ್ನು ದೇವಾಲಯದ ಆವರಣದಲ್ಲಿ ಪ್ರತಿಸ್ಠಾಪಿಸಲು ಸರ್ವಾನುಮತದಿಂದ ನಿರ್ಧಾರ ತೆಗೆದುಕೊಳ್ಳಲಾಗಿತ್ತು.
ರಾಮ ಮಂದಿರ ನಿರ್ಮಾಣಕ್ಕೆ ಅಂದಾಜು 1,800 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ವರದಿ ತಿಳಿಸಿದೆ. ಮಂದಿರ ನಿರ್ಮಾಣದ ಕುರಿತ ನಿಯಮ ಮತ್ತು ಮಾರ್ಗಸೂಚಿಯನ್ನು ಸಭೆಯಲ್ಲಿ ಅಂತಿಮಗೊಳಿಸಲಾಗಿತ್ತು ಎಂದು ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ.