Advertisement

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಟ್ರಸ್ಟ್ ಗೆ ವಾಲ್ಮೀಕಿ ಶ್ರೀಗಳನ್ನು ಸೇರಿಸಲು ಜಿ.ಪಂ ಅನುಮೋದನೆ

09:04 AM Mar 01, 2020 | sudhir |

ಚಿತ್ರದುರ್ಗ: ಅಯೋಧ್ಯೆಯಲ್ಲಿ ರಾಮ‌ ಮಂದಿರ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ರಚಿಸಿರುವ ಟ್ರಸ್ಟ್‌ ಗೆ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಅವರನ್ನು ಸೇರಿಸಲು ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಮಂಡಿಸಿದ ನಡಾವಳಿಗೆ‌ ಅನುಮೋದನೆ ನೀಡಲಾಯಿತು.

Advertisement

ಜಿ.ಪಂ‌‌ ಸದಸ್ಯ ಕೃಷ್ಣಮೂರ್ತಿ ಮಂಡಿಸಿದ ನಡಾವಳಿಯಲ್ಲಿ, ಕೇಂದ್ರ ಸರ್ಕಾರ ರಚಿಸಿರುವ ಟ್ರಸ್ಟ್‌ನಲ್ಲಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅವರನ್ನು ಸೇರಿಸಲಾಗಿದೆ. ಆದರೆ, ಶ್ರೀರಾಮನನ್ನು ಪರಿಚಯಿಸಿದ್ದ ಶ್ರೀ ವಾಲ್ಮೀಕಿ. ಹೀಗಾಗಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಶ್ರೀಗಳನ್ನು ಅಯೋಧ್ಯೆ ರಾಮ ಮಂದಿರ ನಿರ್ಮಾಣ ಟ್ರಸ್ಟ್ ಗೆ ಸೇರಿಸಬೇಕು ಎಂದು ಜಿಲ್ಲಾ ಪಂಚಾಯತಿ ಮೂಲಕ ಒತ್ತಾಯಿಸಲಾಯಿತು. ಇದಕ್ಕೆ ಸಭೆಯಲ್ಲಿದ್ದ ಸದಸ್ಯರೆಲ್ಲರೂ ಒಪ್ಪಿಗೆ ಸೂಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next