Advertisement

ಆಯೋಧ್ಯೆ ರಾಮಮಂದಿರ ಶಿಲಾನ್ಯಾಸ: ಪೊಳಲಿ ದೇವಳದಲ್ಲಿ ವಿಶೇಷ ಪೂಜೆ

10:46 AM Aug 05, 2020 | Mithun PG |

ಬಂಟ್ವಾಳ: ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಇಂದು ಶ್ರೀರಾಮಮಂದಿರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಶಿಲಾನ್ಯಾಸ ನೆರೆವೇರಿಸಲಿದ್ದು, ಈ ಐತಿಹಾಸಿಕ ಕಾರ್ಯಕ್ರಮ ಯಶಸ್ವಿಯಾಗಲಿ ಮತ್ತು ಮಂದಿರ ನಿರ್ಮಾಣ ಕಾರ್ಯ ನಿರ್ವಿಘ್ನವಾಗಿ ನಡೆಯಲೆಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ನೇತೃತ್ವದಲ್ಲಿ ಬಿಜೆಪಿ ಯುವಮೋರ್ಚಾ ಬಂಟ್ವಾಳ ವತಿಯಿಂದ ಜಗನ್ಮಾತೆ ಪೊಳಲಿ ಶ್ರೀ ರಾಜರಾಜೇಶ್ವರಿ ಅಮ್ಮನವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

Advertisement

ಈ ಸಂದರ್ಭದಲ್ಲಿ ಅಯೋಧ್ಯೆ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ  ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಡಾ.ಪ್ರಭಾಕರ್ ಭಟ್ ಕಲ್ಲಡ್ಕರವನ್ನು  ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿಯಾಗಿ ಆಶಿರ್ವಾದ ಪಡೆದರು.ಇವರ ಜೊತೆಗೆ  ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ರಮಾನಾಥ ರಾಯಿ ಯವರು ಉಪಸ್ಥಿರಿದ್ದರು.

ಈ ಸಂದರ್ಭದಲ್ಲಿ  ಬಿಜೆಪಿ ಕ್ಷೇತ್ರಾಧ್ಯಕ್ಷರಾದ ದೇವಪ್ಪ ಪೂಜಾರಿ, ವೆಂಕಟೇಶ್ ನಾವಡ, ತಾ.ಪಂ ಸದಸ್ಯ ಯಶವಂತ ಪೊಳಲಿ,ಯುವ ಮೋರ್ಚಾದ ಸುದರ್ಶನ್ ಬಜ,ಪ್ರದೀಪ್ ಅಜ್ಜಿಬೆಟ್ಟು,ಅಶ್ವಥ್,ಕಾರ್ತಿಕ್ ಬಳ್ಳಾಲ್, ಕಿಶೋರ್ ಪಲ್ಲಿಪ್ಪಾಡಿ.ಲೋಕೇಶ್ ಭರಣಿ,ನಂದರಾಮ್ ರೈ,,ಸುಕೇಶ್ ಚೌಟ,ವಾಮನ ಆಚಾರ್ಯ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next