Advertisement

Ayodhya; ಅಯೋಧ್ಯೆಯಲ್ಲಿ ಭದ್ರತೆ ಹೆಚ್ಚಳ: ಕಾಮಗಾರಿಯಲ್ಲಿ ಯಾವುದೇ ತರಾತುರಿಯಿಲ್ಲ

10:08 PM Dec 28, 2023 | Team Udayavani |

ಅಯೋಧ್ಯೆ : ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶೀಘ್ರದಲ್ಲೇ ಅಯೋಧ್ಯೆ ವಿಮಾನ ನಿಲ್ದಾಣ ಮತ್ತು ರೈಲು ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ. ಅಯೋಧ್ಯೆಗೆ ಅಂತಾರಾಷ್ಟ್ರೀಯ ವಿಮಾನಗಳನ್ನು ತರುವ ಬಗ್ಗೆಯೂ ಪ್ರಧಾನಿ ಚಿಂತನೆ ನಡೆಸುತ್ತಿದ್ದಾರೆ” ಎಂದು ಕೇಂದ್ರ ಸಚಿವೆ ಮತ್ತು ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಗುರುವಾರ ಹೇಳಿದ್ದಾರೆ.

Advertisement

ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ.ಯುಪಿ ಸಿಎಂ ಯೋಗಿ ಆದಿತ್ಯನಾಥ್ ಸರಕಾರ ಡಿಸೆಂಬರ್ 30 ರಂದು ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸಾರ್ವಜನಿಕ ಸಭೆಗೆ ಮೂರು ಲಕ್ಷ ಜನರನ್ನು ಸೇರಿಸುವ ಮೂಲಕ ಅದ್ಧೂರಿ ಸ್ವಾಗತ ನೀಡಲು ಸಿದ್ಧತೆಗಳನ್ನು ನಡೆಸಿದೆ. ಪ್ರಧಾನಿ ಮತ್ತು ಸಿಎಂ ಯೋಗಿ ಅವರು 15 ಕಿಮೀ ಉದ್ದದ ರೋಡ್‌ಶೋ ನಲ್ಲಿ ಭಾಗಿಯಾಗಲಿದ್ದಾರೆ.

ಪ್ರಧಾನಿ ಮೋದಿ ಅಯೋಧ್ಯೆಯಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ. ವಿಮಾನ ನಿಲ್ದಾಣದ ಬಳಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಯಾವುದೇ ತರಾತುರಿಯಲ್ಲ
ಅಯೋಧ್ಯೆ ರಾಮಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿ, ”ಯಾವುದೇ ಕಾಮಗಾರಿ ತರಾತುರಿಯಲ್ಲಿ ನಡೆಯುವುದಿಲ್ಲ, ಗುಣಮಟ್ಟಕ್ಕೆ ಅನುಗುಣವಾಗಿ ನಡೆಯುತ್ತದೆ, ಆಗಬೇಕಾದ ಕೆಲಸ ನಡೆಯುತ್ತಿದೆ.3 ಹಂತಗಳಲ್ಲಿ ನಿರ್ಮಾಣ ಕಾಮಗಾರಿಯನ್ನು ಇರಿಸಲಾಗಿದೆ. 1 ನೇ ಹಂತವು ಡಿಸೆಂಬರ್ 2023 ರವರೆಗೆ, 2024 ರಲ್ಲಿ 2 ನೇ ಹಂತ ಮತ್ತು 3 ನೇ ಹಂತದಲ್ಲಿ ದೇವಾಲಯದ ಸಂಪೂರ್ಣ ನಿರ್ಮಾಣ ಮತ್ತು ದೇವಾಲಯದ ಸುತ್ತಮುತ್ತಲಿನ ನಿರ್ಮಾಣ ಕಾರ್ಯ ನಡೆಯಲಿದೆ ಎಂದು ತಿಳಿಸಿದರು.

ನೃಪೇಂದ್ರ ಮಿಶ್ರಾ ಅವರು ರಾಮಮಂದಿರ ಆವರಣದಲ್ಲಿ ನಿರ್ಮಾಣ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next