Advertisement

ಅಯೋಧ್ಯೆ ದಾಳಿಯ ಉಗ್ರರಿಗೆ ಜೀವಾವಧಿ ಶಿಕ್ಷೆ

12:30 AM Jun 19, 2019 | Team Udayavani |
ಅಲಹಾಬಾದ್‌: ಅಯೋಧ್ಯೆ ಉಗ್ರರ ದಾಳಿ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿರುವ ಇಲ್ಲಿನ ವಿಶೇಷ ನ್ಯಾಯಾಲಯ, ಅವರೆಲ್ಲರಿಗೂ ತಲಾ 2.5 ಲಕ್ಷ ರೂ. ದಂಡ ವಿಧಿಸಿದೆ. ಒಬ್ಬ ಆರೋಪಿಯನ್ನು ದೋಷಮುಕ್ತಗೊಳಿಸಿದೆ. 2005ರ ಜು. 5ರಂದು ನಡೆದಿದ್ದ ಉಗ್ರರ ದಾಳಿಯ ವೇಳೆ ಇಬ್ಬರು ನಾಗರಿಕರು ಸಾವಿಗೀಡಾಗಿದ್ದರು. ಅದರ ಬೆನ್ನಲ್ಲೇ ಉಗ್ರರು ಹಾಗೂ ಸಿಆರ್‌ಪಿಎಫ್ ಸಿಬ್ಬಂದಿ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಐವರು ಉಗ್ರರು ಹತರಾಗಿದ್ದರು. ಏಳು ಮಂದಿ ಏಳು ಮಂದಿ ಸಿಆರ್‌ಪಿಎಫ್ ಸಿಬ್ಬಂದಿಗೆ ಗಾಯಗಳಾಗಿದ್ದವು. ಐವರು ಉಗ್ರರನ್ನು ಬಂಧಿಸಲಾಗಿತ್ತು.
Advertisement

Udayavani is now on Telegram. Click here to join our channel and stay updated with the latest news.

Next