Advertisement

ಅಯೋಧ್ಯೆ ತೀರ್ಪು ಹಿನ್ನಲೆ: ಮಂಗಳೂರು ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

12:57 PM Nov 09, 2019 | Naveen |

ಮಂಗಳೂರು: ಅಯೋಧ್ಯೆ ತೀರ್ಪು ಹಿನ್ನಲೆಯಲ್ಲಿ ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ರ ಅನ್ವಯ ನಿಷೇಧಾಜ್ಞೆಯನ್ನು ಶನಿವಾರ ಬೆಳಗ್ಗೆ 9 ಗಂಟೆಯಿಂದ ಭಾನುವಾರ ಬೆಳಗ್ಗೆ 6 ಗಂಟೆ ತನಕ ಜಾರಿಗೊಳಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ತಿಳಿಸಿದ್ದಾರೆ.

Advertisement

ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸಾರ್ವಜನಿಕ ಶಾಂತಿ, ನೆಮ್ಮದಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಅಯೋಧ್ಯೆ ತೀರ್ಪು ಹಿನ್ನಲೆಯಲ್ಲಿ ಶನಿವಾರ ಬೆಳಗ್ಗೆ 6 ಗಂಟೆಯಿಂದ ದ.ಕ. ಜಿಲ್ಲೆಯ ಎಲ್ಲಾ ರೀತಿಯ ಮದ್ಯದಂಗಡಿ, ವೈನ್ ಶಾಪ್, ಬಾರ್ ಮತ್ತು  ರೆಸ್ಟೋರೆಂಟ್ ಗಳು 24 ಗಂಟೆಗಳ ಕಾಲ ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಶುಕ್ರವಾರದಂದು ಆದೇಶ ಹೊರಡಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next