ಶಿವಮೊಗ್ಗ: ಸರ್ವೋಚ್ಛ ನ್ಯಾಯಾಲಯ ಅಯೋಧ್ಯೆ ರಾಮ ಜನ್ಮಭೂಮಿ ವಿವಾದಕ್ಕೆ ಸಂಬಂ ಧಿಸಿದಂತೆ ಶನಿವಾರ ತೀರ್ಪು ಪ್ರಕಟಿಸಿದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾದ್ಯಂತ ಸೆಕ್ಷನ್ 144ರ ಅನ್ವಯ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.
ನ. 9ರಂದು ಬೆಳಗ್ಗೆ 10 ಗಂಟೆಯಿಂದ ನ. 10ರಂದು ಬೆಳಿಗ್ಗೆ 10 ಗಂಟೆಯವರೆಗೆ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕಾನೂನು ಭಂಗ ಉಂಟು ಮಾಡುವ ಉದ್ದೇಶದಿಂದ 5 ಮತ್ತು ಅದಕ್ಕಿಂತ ಹೆಚ್ಚು ಜನರು ಗುಂಪಾಗಿ ಸೇರುವುದನ್ನು ನಿರ್ಬಂಧಿ ಸಲಾಗಿದೆ. ಯಾವುದೇ ಮೆರವಣಿಗೆ, ಸಭೆ- ಸಮಾರಂಭಗಳು ವಿಜಯೋತ್ಸವ ಇತರೆ ಸಾರ್ವಜನಿಕ ಸಮಾವೇಶಗಳನ್ನು ನಡೆಸುವಂತಿಲ್ಲ.
ಜಿಲ್ಲೆಯನ್ನು ಪ್ರವೇಶಿಸುವ ರಸ್ತೆಗಳಲ್ಲಿ ವಾಹನಗಳ ತಪಾಸಣೆ ನಡೆಸಲಾಗಿದೆ. ಅಲ್ಲದೆ ನಗರವನ್ನು ಪ್ರವೇಶಿಸುವ ಪ್ರಮುಖ ರಸ್ತೆಗಳಲ್ಲಿ ವಾಹನಗಳ ಪರಿಶೀಲನೆ ನಡೆಸಲಾಗಿದೆ. ಆಯಕಟ್ಟಿನ ಸ್ಥಳಗಳಲ್ಲಿ, ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಅಯೋಧ್ಯೆಯ ರಾಮಜನ್ಮಭೂಮಿ ಮತ್ತು ಬಾಬ್ರಿ ಮಸೀದಿ ವಿವಾದಕ್ಕೆ ಸಂಬಂದಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಭದ್ರತೆ ಕೈಗೊಂಡಿದ್ದು ಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿತ್ತು.
ಯಾವುದೇ ವಿನಾಶಕಾರಿ ವಸ್ತು ಇಲ್ಲವೇ ಸೊ#ಧೀಟಕ ವಸ್ತು ಅಥವಾ ಮಾರಕಾಸ್ತ್ರಗಳನ್ನು ಕೊಂಡೊಯ್ಯುವುದನ್ನು ಶೇಖರಿಸುವುದನ್ನು ನಿಷೇಧಿಸಲಾಗಿತ್ತು. ಸ್ಫೋಟಕ, ಪಟಾಕಿ ಸಿಡಿಸುವುದು, ಯಾವುದೇ ವ್ಯಕ್ತಿಗಳ ಪ್ರತಿಕೃತಿ ದಹನ ಮಾಡುವುದು, ಪ್ರಚೋದನೆ ಘೋಷಣೆ, ಭಾಷಣ ಸನ್ನೆ ಮಾಡುವುದನ್ನು ನಿಷೇಧಿ ಸಲಾಗಿತ್ತು. ಸಾರ್ವಜನಿಕ-ಖಾಸಗಿ ಹಾನಿಗೊಳಿಸುವ ವಿರೂಪಗೊಳಿಸುವ ಚಟುವಟಿಕೆ ನಿಷೇಧಿಸಲಾಗಿದೆ ಎಂದು ಹೇಳಲಾಗಿದೆ.