Advertisement
ಆಯುಧ ಪೂಜೆಯಂದು ವಾಹನ ಸಹಿತ ಮನೆ, ಇನ್ನಿತರ ಸಂಸ್ಥೆಗಳಲ್ಲಿರುವ ಆಯುಧಗಳಿಗೆ ಪೂಜೆ ಸಲ್ಲಿಸುವುದು ವಾಡಿಕೆ. ದೇಗುಲಗಳ ಮುಂಭಾಗದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಎಲ್ಲೆಡೆ ಕೋವಿಡ್ ನಿಯಮಾವಳಿಗಳನ್ನು ಪಾಲಿಸಿ ಕೊಂಡೇ ಪೂಜೆ ಸಲ್ಲಿಸಲಾಯಿತು. ಈ ಬಾರಿ ರವಿವಾರವೂ ಆಯುಧ ಪೂಜೆ ಸಲ್ಲಿಸಲು ಭಕ್ತರಿಗೆ ಅವಕಾಶವಿದೆ. ಶನಿವಾರ ದುರ್ಗಾಷ್ಟಮಿಯ ಅಂಗವಾಗಿ ವಿವಿಧ ದೇಗುಲಗಳಲ್ಲಿ ವಿಶೇಷ ಅಲಂಕಾರ, ಮಹಾಪೂಜೆ, ವಿವಿಧ ಧಾರ್ಮಿಕ ಸೇವೆಗಳು ಜರಗಿದವು.
Related Articles
Advertisement
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ರವಿವಾರ ಬೆಳಗ್ಗೆ 10ಕ್ಕೆ ಸರಸ್ವತಿ ದುರ್ಗಾಹೋಮ, 11.30ಕ್ಕೆ ಶತ ಸೀಯಾಳ ಅಭಿಷೇಕ, ಮಧ್ಯಾಹ್ನ 12.30ಕ್ಕೆ ಶಿವಪೂಜೆ (ಮಹಾನವಮಿ), 1.30ಕ್ಕೆ ಅನ್ನಸಂತರ್ಪಣೆ, ಸಂಜೆ 7ಕ್ಕೆ ಭಜನೆ, 9ರಿಂದ ಶ್ರೀ ದೇವಿ ಪುಷ್ಪಾಲಂಕಾರ ಮಹಾಪೂಜೆ, ಉತ್ಸವ ನಡೆಯಲಿದೆ. ಮಹತೋಭಾರ ಶ್ರೀ ಮಂಗಳಾ ದೇವಿ ದೇಗುಲದಲ್ಲಿ ಮಹಾನವಮಿ, ಚಂಡಿಕಾ ಹೋಮ, ರಾತ್ರಿ ದೊಡ್ಡ ರಂಗಪೂಜೆ, ಸಣ್ಣ ರಥೋತ್ಸವ ನಡೆಯಲಿದೆ.
ಉರ್ವ ಶ್ರೀ ಮಾರಿಯಮ್ಮ ದೇಗುಲದಲ್ಲಿ ಬೆಳಗ್ಗೆ 7ಕ್ಕೆ ಪೂಜೆ, ಮಧ್ಯಾಹ್ನ 12.30ಕ್ಕೆ ಸರ್ವಾಲಂಕಾರ ಪೂಜೆ, ಮಹಾಪೂಜೆ, ಸಂಜೆ 7.30ಕ್ಕೆ ಸರ್ವಾಲಂಕಾರ ಪೂಜೆ, ಮಹಾಪೂಜೆ, ರಾತ್ರಿ 8ಕ್ಕೆ ಶ್ರೀ ದೇವಿ ಮಹಾ ರಂಗಪೂಜೆ, 8.30ಕ್ಕೆ ರಥೋತ್ಸವ ನಡೆಯಲಿದೆ.
ಪಡುಪಣಂಬೂರು ಕಲ್ಲಾಪು ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನದಲ್ಲಿ ಅ. 25ರಂದು ಬೆಳಗ್ಗೆ 8.30ಕ್ಕೆ ಮಹಾನವಮಿಯ ಪ್ರಯುಕ್ತ ಚಂಡಿಕಾಯಾಗ ಜರಗಲಿದೆ ಎಂದು ಆಡಳಿತ ಮಂಡಳಿ ಪ್ರಕಟನೆ ತಿಳಿಸಿದೆ.