Advertisement

ಪೊಲೀಸ್ ಕಚೇರಿಯಲ್ಲಿ ಆಯುಧ ಪೂಜೆ ಸಡಗರ

01:15 PM Oct 14, 2021 | Team Udayavani |

ರಾಯಚೂರು: ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಆಯುಧ ಪೂಜೆಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.

Advertisement

ಸಶಸ್ತ್ರ ಮೀಸಲು ಪಡೆಯ ಕಚೇರಿಯಲ್ಲಿ ಇಲಾಖೆಯ ಬಂದೂಕು, ರೈಫಲ್ ಸೇರಿದಂತೆ ವಿವಿಧ ಆಯುಧಗಳನ್ನಿಟ್ಟು ಪೂಜೆ ಮಾಡಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಕಂ ದಂಪತಿ ಸಮೇತರಾಗಿ ಪಾಲ್ಗೊಂಡು ಪೂಜೆ ನೆರವೇರಿಸಿದರು. ಈ ನಿಮಿತ್ತ ನಡೆದ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿ ಕುಣಿದು ಕುಪ್ಪಳಿಸಿದರು.

ಸಂಭ್ರಮದಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿ ಸೇರಿದಂತೆ ಕುಟುಂಬ ಸದಸ್ಯರು ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಎಸ್ ಪಿ, ದಸರಾ ಹಬ್ಬ ಕೆಟ್ಟದ್ದರ ಮೇಲೆ ಒಳ್ಳೆಯತನದ ಗೆಲುವಿನ ಸಂಕೇತವಾಗಿದೆ.  ಎಲ್ಲರಿಗೂ ಆಯುಧಪೂಜೆ ಹಾಗೂ ವಿಜಯದಶಮಿ ಹಬ್ಬದ ಶುಭಾಶಯಗಳು ಎಂದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next