Advertisement

Theerthahalli: ಪೊಲೀಸ್ ಠಾಣೆಯಲ್ಲಿ ಆಯುಧ ಪೂಜೆ; ಡಿವೈಎಸ್ ಪಿ ಸೇರಿ ಎಲ್ಲಾ ಪೊಲೀಸರು ಭಾಗಿ

04:09 PM Oct 23, 2023 | Kavyashree |

ತೀರ್ಥಹಳ್ಳಿ: ನಾಡಹಬ್ಬ ದಸರಾ ಹಿಂದಿನ ದಿನವಾದ ಸೋಮವಾರ ಆಯುಧ ಪೂಜೆಯನ್ನು ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸರ್ಕಾರಿ ವಾಹನಗಳು, ಖಾಸಗಿ ವಾಹನಗಳಿಗೆ ಪೂಜೆ ಸಲ್ಲಿಸಿ ಸಂಭ್ರಮದಿಂದ ಹಬ್ಬ ಆಚರಣೆ ಮಾಡಲಾಯಿತು.

Advertisement

ಪಟ್ಟಣದ ಪೊಲೀಸ್ ಠಾಣೆಯಲ್ಲಿ ಚಾಮುಂಡೇಶ್ವರಿ ದೇವಿಯ ಫೋಟೋ ಜೊತೆಗೆ ಕಲಶ ಪ್ರತಿಷ್ಠಾಪನೆ ಮಾಡಿ, ವಾಹನಗಳಿಗೆ ಪೂಜೆ ಸಲ್ಲಿಸಿ ಬಂದೂಕು ಮತ್ತು ರಿವಾಲ್ವರ್ ಗಳಿಗೆ ಪೂಜೆ ಮಾಡಲಾಯಿತು.

ಪೂಜೆಯಲ್ಲಿ ಡಿವೈಎಸ್ ಪಿ ಗಜಾನನ ವಾಮನ ಸುತಾರ, ಇನ್ಸ್ಪೆಕ್ಟರ್ ಅಶ್ವಥ್ ಗೌಡ, ಪಿಎಸ್ಐ ಸುಷ್ಮಾ, ಪಿಎಸ್ಐ ಶಿವನಗೌಡ ಸೇರಿದಂತೆ ಎಲ್ಲಾ ಪೊಲೀಸ್ ಸಿಬ್ಬಂದಿಗಳು ಭಾಗಿಯಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next