Advertisement

ಸಚಿವರಿಂದ ಆಯುರ್ವೇದ ಕಾಲೇಜು ಪರಿಶೀಲನೆ

11:02 AM Jun 29, 2020 | Suhan S |

ಹುಬ್ಬಳ್ಳಿ: ಜಿಲ್ಲಾ ಉಸ್ತುವಾರಿ ಜಗದೀಶ ಶೆಟ್ಟರ ಅವರು ರವಿವಾರ ಗೋಕುಲ ರಸ್ತೆ ಬಸವೇಶ್ವರ ನಗರ ಬಳಿಯ ಸಂಜೀವಿನಿ ಹಾಗೂ ಹಳೇಹುಬ್ಬಳ್ಳಿ ಹೆಗ್ಗೇರಿಯ ಆಯುರ್ವೇದ ಕಾಲೇಜಿನಲ್ಲಿ ವ್ಯವಸ್ಥೆಗೊಳಿಸಿರುವ ಕೋವಿಡ್‌-19 ಆಸ್ಪತ್ರೆಗಳಿಗೆ ಭೇಟಿಕೊಟ್ಟು ಪರಿಶೀಲಿಸಿದರು.

Advertisement

ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಿಮ್ಸ್ ನ ಕೋವಿಡ್‌-19 ಆಸ್ಪತ್ರೆ ಜೊತೆಗೆ ಕಡಿಮೆ ಲಕ್ಷಣಗಳುಳ್ಳ ರೋಗಿಗಳ ಚಿಕಿತ್ಸೆಗೆ ಆಯುರ್ವೇದ ಕಾಲೇಜುಗಳಲ್ಲಿ ಕೋವಿಡ್‌ ಆಸ್ಪತ್ರೆಗಳನ್ನು ವ್ಯವಸ್ಥೆಗೊಳಿಸಲಾಗಿದೆ. ಕಿಮ್ಸ್  ನಲ್ಲಿ 35 ವೆಂಟಿಲೇಟರ್‌ ಹಾಗೂ 250 ಬೆಡ್‌ಗಳಿವೆ. ಕೊವೀಡ್‌ನಿಂದ ತೀವ್ರವಾಗಿ ಬಳಲುತ್ತಿರುವ ರೋಗಿಗಳಿಗೆ ಕಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್‌ ಸಚಿವರಿಗೆ ತಿಳಿಸಿದರು.

ಮುಖ್ಯಮಂತ್ರಿ ಕಾನೂನು ಸಲಹೆಗಾರ ಮೋಹನ ಲಿಂಬಿಕಾಯಿ, ಶಾಸಕ ಅರವಿಂದ ಬೆಲ್ಲದ, ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ| ಯಶವಂತ ಮದೀನಕರ್‌, ಹುಬ್ಬಳ್ಳಿ ತಹಶೀಲ್ದಾರ್‌ ಶಶಿಧರ ಮಾಡ್ಯಾಳ, ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ| ಎ.ಎಸ್‌. ಪ್ರಶಾಂತ ಇನ್ನಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next