Advertisement
ಕಾಲೇಜುವಾರು, ಕೋರ್ಸ್‌ವಾರು ಹಾಗೂ ವರ್ಗವಾರು ಲಭ್ಯವಿರುವ ಸೀಟುಗಳ ವಿವರವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಅಕ್ಟೋಬರ್ 1ರಿಂದ ದಾಖಲೆ ಪರಿಶೀಲನೆ ನಡೆಯಲಿದೆ. ಅ.10ರ ಬೆಳಗ್ಗೆ 11 ಗಂಟೆ ತನಕ ಆಪ್ಷನ್ ಎಂಟ್ರಿಗೆ ಅವಕಾಶ ಇದೆ. ಅದೇ ದಿನ ಸಂಜೆ 6ಕ್ಕೆ ಸೀಟು ಹಂಚಿಕೆ ನಡೆಯಲಿದೆ.ಸೀಟು ಪಡೆದ ಅಭ್ಯರ್ಥಿಗಳು ಶುಲ್ಕ ಪಾವತಿಸಿ, ಪ್ರವೇಶಪತ್ರ ಡೌನ್‌ಲೋಡ್ ಮಾಡಿಕೊಳ್ಳಲು ಅ.5ರವರೆಗೂ ಅವಕಾಶ ಇದೆ. ಅ.6ರ ಸಂಜೆ 5.30ರೊಳಗೆ ಸಂಬಂಧಿಸಿದ ಕಾಲೇಜಿಗೆ ದಾಖಲಾಗಬೇಕು. ಮಾಹಿತಿಗಾಗಿ ಪ್ರಾಧಿಕಾರದ ವೆಬ್‌ಸೈಟ್ //kea.kar.nic.in ನೋಡಬಹುದು ಎಂದು ಪ್ರಕಟಣೆ ತಿಳಿಸಿದೆ.
ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ ಒದಗಿಸಲು ಮೀಸಲಿಟ್ಟಿರುವ 450 ಕೋಟಿ ರೂ.ಗಳಲ್ಲಿ 150 ಕೋಟಿ ರೂ.ಗಳನ್ನು ಸರ್ಕಾರ ಬಿಡುಗಡೆ ಮಾಡಿದೆ.ಮೂರು ವರ್ಷಗಳಲ್ಲಿ ಸರ್ಕಾರಿ ಪ್ರಾಥಮಿಕ,ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ಕಟ್ಟಡ ದುರಸ್ತಿ, ಮರು ನಿರ್ಮಾಣ ಸೇರಿ ವಿವಿಧ ಕಾಮಗಾರಿಗಳಿಗೆ 450 ಕೋಟಿ.ರೂ.ಗಳನ್ನು ನೀಡಲು ಸರ್ಕಾರ ಒಪ್ಪಿಕೊಂಡಿತ್ತು. 2018-19ನೇ ಸಾಲಿಗೆ ಬಿಡುಗಡೆ ಮಾಡಿರುವ ಅನುದಾನವನ್ನು ಆರ್ಥಿಕ ವರ್ಷಾಂತ್ಯದೊಳಗೆ ಪೂರೈಸುವಂತೆಯೂ ಸರ್ಕಾರ ಸೂಚನೆ ನೀಡಿದೆ.