Advertisement

8 ಕೋಟಿ ರೂ. ವೆಚ್ಚದಲ್ಲಿ ಆಯುಷ್‌ ಆಸ್ಪತ್ರೆ

07:38 AM May 27, 2020 | Lakshmi GovindaRaj |

ಚಿಕ್ಕಬಳ್ಳಾಪುರ: ಮಹಾಮಾರಿ ಕೊರೊನಾ ವೈರಸ್‌ ನಿಯಂತ್ರಣಕ್ಕಾಗಿ ರಾಜ್ಯದಲ್ಲಿನ ಸೋಂಕಿತರಿಗೆ ಆಯುಷ್‌ ಹಾಗೂ ಯುನಾನಿ ವೈದ್ಯ ಪದಟಛಿತಿ ಅಳವಡಿಕೆಗೆ ಸಾಕಷ್ಟು ಪ್ರಯೋಗ ನಡೆಯುತ್ತಿದೆ ಎಂದು ರಾಜ್ಯ ವೈದ್ಯಕೀಯ ಶಿಕ್ಷಣ  ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

Advertisement

ಚಿಕ್ಕಬಳ್ಳಾಪುರ ನಗರದ ಹೊರ ವಲಯದ ವರಮಲ್ಲೇನಹಳ್ಳಿಯಲ್ಲಿ ಮಂಗಳವಾರ 8 ಕೋಟಿ ರೂ. ವೆಚ್ಚದಲ್ಲಿ 50 ಹಾಸಿಗೆಗಳುಳ್ಳ ನೂತನ ಆಯುಷ್‌ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ  ನೆರವೇರಿಸಿ ಮಾತನಾಡಿ, ಆಯುಷ್‌ ವೈದ್ಯ ಪದತಿಗೆ ಶತಮಾನಗಳ ಇತಿಹಾಸ ಇದೆ ಎಂದರು. ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ, ವಿಧಾನ ಪರಿಷತ್‌ ಸದಸ್ಯರಾದ ತೂಪಲ್ಲಿ ಚೌಡರೆಡ್ಡಿ, ತಾಪಂ ಅಧ್ಯಕ್ಷ ರಾಮಸ್ವಾಮಿ,  ಜಿಲ್ಲಾಧಿಕಾರಿ ಆರ್‌.ಲತಾ,

ಜಿಪಂ ಸಿಇಒ ಫೌಝೀಯಾ ತರುನ್ನಮ, ಎಸ್ಪಿ ಮಿಥುನ್‌ ಕುಮಾರ್‌, ಗ್ರಾಪಂ ಅಧ್ಯಕ್ಷ ವೆಂಕಟೇಶ್‌, ಕೋಚಿಮುಲ್‌ ಮಾಜಿ ಅಧ್ಯಕ್ಷ ಕೆ.ವಿ.ನಾಗರಾಜ, ಎಪಿಎಂಸಿ ಅಧ್ಯಕ್ಷ ನಾರಾಯಣ  ಸ್ವಾಮಿ, ಡಿಸಿಸಿ ಬ್ಯಾಂಕ್‌  ನಿರ್ದೇಶಕ ದ್ಯಾವಣ್ಣ, ಮುಖಂಡರಾದ ಎಂಎಫ್ಸಿ ನಾರಾಯಣಸ್ವಾಮಿ, ಮರಳಕುಂಟೆ ಕೃಷ್ಣಮೂರ್ತಿ, ಜಿಲ್ಲಾ ಆಯುಷ್‌ ಅಧಿಕಾರಿ ಷಹಾಬುದ್ದೀನ್‌, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಕೃಷ್ಣಮೂರ್ತಿ ಮತ್ತಿತರರು ಇದ್ದರು.

ಬರಲಿಲ್ಲ ಶ್ರೀರಾಮುಲು!: ಆಯುಷ್‌ ಆಸ್ಪತ್ರೆ ಕಟ್ಟಡ ನಿರ್ಮಾಣದ ಶಂಕುಸ್ಥಾಪನೆ ನೆರವೇರಿಸಬೇಕಿದ್ದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮಲು ಕೊನೆಗೂ ಕಾರ್ಯಕ್ರಮಕ್ಕೆ ಆಗಮಿಸದೇ ಗೈರಾದರು. ಶ್ರೀರಾಮುಲು ಅವರಿಗೆ ಸ್ವಾಗತ ಕೋರುವ ಫ್ಲೆಕ್ಸ್‌ ಹಾಗೂ ಬ್ಯಾನರ್‌ಗಳು ಎಲ್ಲೆಡೆ ರಾರಾಜಿಸಿದರೂ ರಾಮುಲು ಮಾತ್ರ ಜಿಲ್ಲೆಯತ್ತ ತಲೆಹಾಕಲಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next