Advertisement
ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಯೋಜನೆ ಮತ್ತು ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಯೋಜನೆಯ ಪರಿಣಾಮಕಾರಿ ಅನುಷ್ಠಾನದ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಿದ್ದ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಕಷ್ಟು ಆಸ್ಪತ್ರೆಗಳಿದ್ದು, ಆರೋಗ್ಯ ವ್ಯವಸ್ಥೆ ಉತ್ತಮವಾಗಿದೆ. ಆದರೆ ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸೆಗಳು ಪಡೆಯುವಲ್ಲಿ ಗೊಂದಲಗಳು ಉಂಟಾಗುತ್ತಿರುವುದು ವಿಷಾದಕರ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಆಯುಷ್ಮಾನ್ ಅಡಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬಿಸುವುದು, ರೋಗಿಗಳನ್ನು ಅಲೆದಾಡಿಸುವುದು, ಸರಕಾರಿ ಆಸ್ಪತ್ರೆಯ ಶಿಫಾರಸು ಪತ್ರ ನೀಡಲು ವಿಳಂಬಿಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬರುತ್ತಿವೆ. ಈ ನಿಟ್ಟಿನಲ್ಲಿ ಎಲ್ಲಾ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಭಾರತ್ ಸೌಲಭ್ಯಗಳ ಕುರಿತು ಆರೋಗ್ಯ ಇಲಾಖೆ, ಆಸ್ಪತ್ರೆ ಮತ್ತು ರೋಗಿಗಳ ನಡುವೆ ಸಮನ್ವಯ ಸಾ ಧಿಸಲು ನೋಡಲ್ ಅ ಕಾರಿಯನ್ನು ನೇಮಿಸಬೇಕು. ಆಸ್ಪತ್ರೆಗಳಲ್ಲಿ 24 ಗಂಟೆಯೂ ಆಯುಷ್ಮಾನ್ ಸೇವೆ ಲಭ್ಯವಿರಬೇಕು ಎಂದು ಸಂಸದರು ಹೇಳಿದರು.
Related Articles
Advertisement
ಆಯುಷ್ಮಾನ್ ಭಾರತ್ ಯೋಜನೆಯಡಿ ಬಿಪಿಎಲ್ ಕುಟುಂಬದ ಸದಸ್ಯರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ದೊರೆಯಲಿದೆ. ಎಪಿಎಲ್ ಕುಟುಂಬದವರಿಗೆ ಒಟ್ಟಾರೆ ಚಿಕಿತ್ಸೆ ವೆಚ್ಚದಲ್ಲಿ ಶೇ.30 ರಿಯಾಯಿತಿ ಪಡೆಯಲು ಅವಕಾಶ ಇದೆ. ಆದರೆ ಕೆಲವು ಆಸ್ಪತ್ರೆಗಳಲ್ಲಿ ಎಪಿಎಲ್ ಕುಟುಂಬದವರಿಗೆ ಆಯುಷ್ಮಾನ್ ಭಾರತ್ ಸವಲತ್ತು ನೀಡಲು ನಿರಾಕರಿಸುತ್ತಿರುವ ಬಗ್ಗೆ ಮಾಹಿತಿ ಬಂದಿದ್ದು, ಈ ಬಗ್ಗೆ ಕ್ರಮ ಜರುಗಿಸಬೇಕಾಗಬಹುದು ಎಂದು ಅವರು ಎಚ್ಚರಿಕೆ ನೀಡಿದರು.
15.08 ಲಕ್ಷ ರೂ. ಬಿಡುಗಡೆಜಿಲ್ಲಾ ಆರೋಗ್ಯಾಧಿಕಾರಿ ಡಾ| ಎಚ್.ಆರ್. ತಿಮ್ಮಯ್ಯ ಮಾತನಾಡಿ, ಕಳೆದ ಆಗಸ್ಟ್ ತಿಂಗಳೊಂದರಲ್ಲಿ ಜಿಲ್ಲೆಯಲ್ಲಿ ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸೆ ನೀಡಿದ ಮೊತ್ತ 15.08 ಲಕ್ಷ ರೂ. ವನ್ನು ವಿವಿಧ ಆಸ್ಪತ್ರೆಗಳಿಗೆ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು. ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಅಧೀಕ್ಷಕ ಡಾ| ಶಿವಕುಮಾರ್ ಮಾತನಾಡಿ, ಸರಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಚಿಕಿತ್ಸೆಗಳಿಗೆ ಖಾಸಗಿ ಆಸ್ಪತ್ರೆಗಳಿಗೆ ಶಿಫಾರಸು ನೀಡಲು ಅವಕಾಶ ಇಲ್ಲ. ಸಣ್ಣ ಕಾಯಿಲೆಗಳಿಗೂ ಖಾಸಗಿ ಆಸ್ಪತ್ರೆಗಳಲ್ಲಿ ಶಿಫಾರಸ್ಸು ನೀಡಲು ಒತ್ತಡ ಬರುತ್ತಿದ್ದು ಇದಕ್ಕೆ ನಿಯಮದಲ್ಲಿ ಅವಕಾಶವಿಲ್ಲವೆಂದು ತಿಳಿಸಿದರು. ಸಭೆಯಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಡಾ| ಭರತ್ ಶೆಟ್ಟಿ, ಹರೀಶ್ ಪೂಂಜಾ, ಉಮಾನಾಥ ಕೋಟ್ಯಾನ್ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆ ಪ್ರತಿನಿ ಧಿಗಳು ಉಪಸ್ಥಿತರಿದ್ದರು.