Advertisement

ಸೆ. 25ಕ್ಕೆ ಆಯುಷ್ಮಾನ್‌ ಭಾರತ ಉದ್ಘಾಟನೆ

06:00 AM Sep 21, 2018 | |

ಹೊಸದಿಲ್ಲಿ: ಮೋದಿ ಕೇರ್‌ ಎಂದೇ ಕರೆಯಲಾದ ಆಯುಷ್ಮಾನ್‌ ಭಾರತ ಆರೋಗ್ಯ ವಿಮೆ ಯೋಜನೆಯನ್ನು ಪ್ರಧಾನಿ 25 ರಂದು ಉದ್ಘಾಟಿಸಲಿದ್ದು, 27 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳು ಈ ಯೋಜನೆಗೆ ಸೇರ್ಪಡೆಗೊಳ್ಳಲು ಸಿದ್ಧವಾಗಿವೆ.

Advertisement

ಪಂಡಿತ್‌ ದೀನದಯಾಳ ಉಪಾಧ್ಯಾಯ ಅವರ ಜನ್ಮ ಶತಮಾನೋತ್ಸವದ ದಿನದಂದೇ ಉದ್ಘಾಟನೆಗೊಳ್ಳಲಿದ್ದು, ಸಾರ್ವಜನಿಕ ಹಾಗೂ ಖಾಸಗಿ ವಲಯದ 15 ಸಾವಿರಕ್ಕೂ ಹೆಚ್ಚು ಆಸ್ಪತ್ರೆಗಳು ಯೋಜನೆಗೆ ಸೇರ್ಪಡೆಗೊಳ್ಳಲು ಸಮ್ಮತಿಸಿವೆ. ಈ ಯೋಜನೆ ಅಡಿಯಲ್ಲಿ 10.74 ಕೋಟಿ ಬಡ ಕುಟುಂಬಗಳಿಗೆ ಆರೋಗ್ಯ ವಿಮೆ ಸಿಗಲಿದೆ ಎಂದು ನೀತಿ ಆಯೋಗದ ಸದಸ್ಯ ಕೆ.ವಿ ಪಾಲ್‌ ಹೇಳಿದ್ದಾರೆ. ಈ ಮಧ್ಯೆ ಹಳೆಯ ಹಾಗೂ ಹೊಸ ವೈದ್ಯಕೀಯ ಉಪಕರಣಗಳಿಗೆ ಭಾರತೀಯ ಮಾನದಂಡವನ್ನು ಕೇಂದ್ರ ಸರಕಾರ ಶೀಘ್ರದಲ್ಲೇ ಪರಿಚಯಿಸಲಿದೆ. ಸುಮಾರು 1 ಸಾವಿರಕ್ಕೂ ಹೆಚ್ಚು ಉಪಕರಣಗಳನ್ನು ಮಾನದಂಡಕ್ಕೆ ಒಳಪಡಿಸಲಾಗುತ್ತಿದೆ ಎಂದು ಉನ್ನತ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next