Advertisement

Puttur: ಮಾತು ಬಾರದವನಿಗೆ ಮಾತು ಬಂತು.. ಅಯ್ಯಪ್ಪನ ಮಹಿಮೆಗೆ ಸಾಕ್ಷಿಯಾದ ಪುತ್ತೂರಿನ ಬಾಲಕ

07:17 PM Dec 11, 2024 | Team Udayavani |

ಪುತ್ತೂರು: ಅಯ್ಯಪ್ಪನ ಭಕ್ತರಿಗೆ ಸ್ವಾಮಿಯ ಮಹಿಮೆಯ ಪ್ರತ್ಯಕ್ಷ ದರ್ಶನವಾಗುತ್ತದೆ ಎನ್ನುವ ಹಲವು ಸುದ್ಧಿಗಳು ಎಲ್ಲೆಡೆ ಕೇಳಿ ಬರುತ್ತದೆ. ಇದೇ ಕಾರಣಕ್ಕಾಗಿಯೇ ಅಯ್ಯಪ್ಪ ಸ್ವಾಮಿಯ ಪ್ರಮುಖ ಕ್ಷೇತ್ರ ಶಬರಿಮಲೆಗೆ ಭೇಟಿ ನೀಡುವ ಭಕ್ತರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ.

Advertisement

ಮಾತು ಬರದ ಬಾಲಕನೊಬ್ಬ ಅಯ್ಯಪ್ಪ ಮಾಲೆ ಧರಿಸಿದ ಬಳಿಕ ಮಾತನಾಡಲು ಶುರು ಮಾಡಿದ ಪವಾಡ ಸದೃಶ ಘಟನೆಯೊಂದು  ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಪುತ್ತೂರಿನ ಸಾಮೆತ್ತಡ್ಕ ನಿವಾಸಿ ಪ್ರಸನ್ನ ಇದೀಗ ಮಾತನಾಡುವ ಮೂಲಕ ಅಯ್ಯಪ್ಪನ ಪವಾಡಕ್ಕೆ ಸಾಕ್ಷಿಯಾಗಿದ್ದಾರೆ.

ಒಂದು ಶಬ್ದವನ್ನೂ ಸರಿಯಾಗಿ ಮಾತನಾಡದ ಪುತ್ತೂರು ನಿವಾಸಿ ಪ್ರಸನ್ನ ಎನ್ನುವ ಈ ಬಾಲಕ ಕಳೆದ ವರ್ಷ ಕರುಣಾಮಯಿ ಅಯ್ಯಪ್ಪ ಭಕ್ತವೃಂದ ಪುತ್ತೂರು ಇವರ ತಂಡದಲ್ಲಿ ಅಯ್ಯಪ್ಪ ಮಾಲೆ ಹಾಕಿ ನಲವತ್ತೆಂಟು ದಿನಗಳ ಕಾಲ ಕಠಿಣ ವೃತಾಚರಣೆ ನಡೆಸಿ ಶಬರಿಮಲೆ ಏರಿದ್ದರು. ಸುಮಾರು 48 ಮೈಲು ದುರ್ಗಮ ಕಾಡಿನ ಹಾದಿಯಲ್ಲಿ ಸಾಗಿ ಸ್ವಾಮಿ ದರ್ಶನವನ್ನು ಪಡೆದು ಬಂದ ಬಳಿಕ ಮಾತನಾಡಲು ಶುರು ಮಾಡಿದ್ದಾನೆ. ಇದು ಅಯ್ಯಪ್ಪನ ಪವಾಡವೆಂದು ಸ್ಥಳೀಯರು ಹೇಳುತ್ತಿದ್ದಾರೆ.

ಮಾತನಾಡಲು ಕಷ್ಟಪಡುತ್ತಿದ್ದ ಪ್ರಸನ್ನ ಮಾತನಾಡಲು ಶುರು ಮಾಡಿದ ಬಳಿಕ ಅಯ್ಯಪ್ಪ ಸ್ವಾಮಿಯ ಶರಣು ಎಂದು ಕರೆಯುತ್ತಿದ್ದಾನೆ.ಈ ಬಾರಿ ಪ್ರಸನ್ನ ಮತ್ತೊಮ್ಮೆ ಅಯ್ಯಪ್ಪನ ಮಾಲೆ ಧರಿಸಿದ್ದು, ಶಬರಿ ಮಲೆಗೆ ಹೋಗಲು ಸಿದ್ದರಾಗಿದ್ದಾರೆ.

Advertisement

ಮೊದಲ ಬಾರಿಗೆ ಮಾಲೆ ಧರಿಸಲು ಬಂದಾಗ ಕೇಳಲು ಮತ್ತು ಮಾತನಾಡಲು ಆಗದ ಸ್ಥಿತಿಯಲ್ಲಿದ್ದ ಪ್ರಸನ್ನನಿಗೆ ಇದೀಗ ಒಂದು ಕಿವಿ ಕೇಳಿಸುತ್ತಿದೆ. ಮಾತನಾಡಲು ಶಬ್ದಗಳು ಹೊರಡುತ್ತಿದೆ.

ಮೊದಲ ಬಾರಿಗೆ ಮಾಲೆ‌ ಹಾಕಲು ಬಂದ ಸಂದರ್ಭದಲ್ಲಿ ಕೈ ಸನ್ನೆಯ ಮೂಲಕ ತನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದ ಪ್ರಸನ್ನ ಬಾಯಲ್ಲಿ ಮಾತನಾಡಲಾರಂಭಿಸಿರುವುದು ಗುರು ಸ್ವಾಮಿಗಳಿಗೆ ಸಂತಸ‌ ತಂದಿದೆ.

ಇಂತಹ‌ ಹಲವು ಉದಾಹರಣೆಗಳನ್ನು ಹಿರಿಯ ಅಯ್ಯಪ್ಪ ಮಾಲಾಧಾರಿಗಳು ಉದಾಹರಣೆಯ ಸಹಿತ ನೀಡುತ್ತಾರೆ. ಈ ಸಾಲಿಗೆ ಪ್ರಸನ್ನ ಕೂಡಾ ಸೇರಿದ್ದು, ಅಯ್ಯಪ್ಪನ ಮಹಿಮೆಯಿಂದ ಎಲ್ಲವೂ ಸಾಧ್ಯ ಎನ್ನುವುದು ಮತ್ತೊಮ್ಮೆ ಜಗಜ್ಜಾಹೀರಾಗಿದೆ.

ಪುತ್ತೂರಿನ ಮಹಾಲಿಂಗೇಶ್ವರ ಐಟಿಐನಲ್ಲಿ ಎರಡನೇ ವರ್ಷದ ಸಿವಿಲ್ ಡಿಪ್ಲೊಮಾ ಮಾಡುತ್ತಿರುವ ಪ್ರಸನ್ನ, ವರ್ಷದ ಹಿಂದೆ ತನಕ ಒಂದು ಶಬ್ದವನ್ನೂ ಮಾತನಾಡಲಾರದ ಸ್ಥಿತಿಯಲ್ಲಿದ್ದ. ಇದೀಗ ಈತನ ಸ್ವಭಾವದಲ್ಲಾದ ಬದಲಾವಣೆ ಆತನ ಮೇಲೆ ಅಯ್ಯಪ್ಪ ಸ್ವಾಮಿ ದಯೆ ತೋರಿದ್ದಾನೆ ಅನ್ನೋದು ಹಿರಿಯ ಅಯ್ಯಪ್ಪ ಮಾಲಾಧಾರಿಗಳ ಅಭಿಪ್ರಾಯವಾಗಿದೆ‌.

Advertisement

Udayavani is now on Telegram. Click here to join our channel and stay updated with the latest news.

Next